ಮೈಸೂರು: ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಬುಧವಾರ) ದರ್ಶನ್ (Darshan) ಜಾಮೀನು ರದ್ದು ಅರ್ಜಿ ವಿಚಾರಣೆ ಹಿನ್ನೆಲೆ ದರ್ಶನ್ ತಾಯಿ ಮೀನಾ ತೂಗುದೀಪ (Meena Thoogudeepa) ದೇವರ ಮೊರೆ ಹೋಗಿದ್ದಾರೆ.
ನಂಜನಗೂಡಿನ (Nanjangud) ನಂಜುಂಡೇಶ್ವರನಿಗೆ ಮೀನಾ ತೂಗುದೀಪ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್‌ಗೆ ಕರ್ನಾಟಕ ಹೈಕೋರ್ಟ್ ಬೇಲ್ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ಇಂದು ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ದರ್ಶನ್ ತಾಯಿ ಟೆಂಪಲ್ ರನ್ ಮಾಡಿದ್ದಾರೆ. ಇದನ್ನೂ ಓದಿ: ಗದಗ| ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ