ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ 15 ದಿನಗಳ ಬಳಿಕ ಚಿತ್ರದ ವಿಡಿಯೋ ಹಾಡು ಬಿಡುಗಡೆ ಆಗಿದೆ.
ಈ ಬಗ್ಗೆ ದರ್ಶನ್ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮ ಪ್ರೀತಿಯ `ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾನು ಸದಾ ಚಿರಋಣಿ” ಎಂದು ಟ್ವೀಟ್ ಮಾಡಿ ವಿಡಿಯೋ ಲಿಂಕ್ ಹಾಕಿದ್ದಾರೆ.
ಚಿತ್ರ ಬಿಡುಗಡೆ ಮುನ್ನವೇ ಈ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಆಗಿತ್ತು. ಈಗ ಈ ಹಾಡು ಬಿಡುಗಡೆ ಆಗಿದ್ದು, ಈ ಹಾಡಿನಲ್ಲಿ ಸ್ಯಾಂಡಲ್ವುಡ್ ನಟರಾದ ಪ್ರಜ್ವಲ್ ದೇವರಾಜ್, ಪ್ರೇಮ್, ವಿನೋದ್ ಪ್ರಭಾಕರ್, ಶರಣ್, ಚಿರಂಜೀವಿ ಸರ್ಜಾ ಹಾಗೂ ದರ್ಶನ್ ಅವರ ಮಗ ವಿನೀಶ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.
ಈ ಹಾಡಿನಲ್ಲಿ ಚಿತ್ರದ ನಾಯಕನ ವರ್ಣನೆಯನ್ನು ಹೇಳಲಾಗಿದೆ. ಶಿವನಂದಿ ಪಾತ್ರದಲ್ಲಿ ಕಾಣಿಸಿಕೊಂಡ ದರ್ಶನ್ ಇಂಟ್ರಡಕ್ಷನ್ ಹಾಡು ಇದಾಗಿದ್ದು, ಸಿನಿಮಾ ಟೈಟಲ್ ಗೆ ತಕ್ಕಂತೆ ಯಜಮಾನನ ಗುಣಗಳನ್ನು ಹಾಡಿನ ರೂಪದಲ್ಲಿ ತೋರಿಸಲಾಗಿದೆ.
ಯಾಜಮಾನ ಚಿತ್ರಕ್ಕೆ ದರ್ಶನ್ಗೆ ನಾಯಕಿಯಾಗಿ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ನಟಿಸಿದ್ದಾರೆ. ಬಿ.ಸುರೇಶ್ ಹಾಗೂ ಶೈಲಜಾ ನಾಗ್ ಅವರ ಮಿಡಿಯಾ ಹೌಸ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ. ನಿರ್ದೇಶಕ ಪೊನ್ನುಕುಮಾರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ನಿಮ್ಮ ಪ್ರೀತಿಯ ‘ಯಜಮಾನ’ ಚಿತ್ರದ ಶಿವನಂದಿ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನೀವು ತೋರಿರುವ ಪ್ರೀತಿ-ಪ್ರೋತ್ಸಾಹಕ್ಕೆ ನಾ ಸದಾ ಚಿರಋಣಿ ????#Yajamana #Shivanandi https://t.co/VhNsxKC1u7
— Darshan Thoogudeepa (@dasadarshan) March 15, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv