– ದರ್ಶನ್ ಹೆಸರಿನಲ್ಲಿ ವಿಶೇಷ ಪೂಜೆ
ಬಳ್ಳಾರಿ: ನಗರದ ಅಧಿದೇವತೆ ಕನಕದುರ್ಗಮ್ಮ ದೇವಿ ದೇವಸ್ಥಾನಕ್ಕೆ (Kanaka Durgamma Temple) ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿ ದರ್ಶನ್ ಹೆಸರಿನಲ್ಲಿ ಅಭಿಷೇಕ, ಅರ್ಚನೆ ನೆರವೇರಿಸಿ, ದೇವಿಗೆ ಉಡಿ ತುಂಬುವ ಮೂಲಕ ಹರಕೆ ತೀರಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Chitradurga Renukaswamy Case) ಪ್ರಮುಖ ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಮೂರು ತಿಂಗಳ ಕಾಲ ವಿಚಾರಣಾಧೀನ ಕೈದಿಯಾಗಿ ಬಂಧಿಯಾಗಿದ್ದರು. ಇದನ್ನೂ ಓದಿ: ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಸತ್ತಂತೆ: ರಾಹುಲ್ ಗಾಂಧಿ
ಈ ವೇಳೆ ದರ್ಶನ್ಗೆ ಜಾಮೀನು ದೊರೆಯಲೆಂದು ವಿಜಯಲಕ್ಷ್ಮಿ ಕನಕದುರ್ಗಮ್ಮ ದೇವಿಯಲ್ಲಿ ಹರಕೆ ಹೊತ್ತು ಪೂಜೆ ಸಲ್ಲಿಸಿದ್ದರು. ಇದೀಗ ತಮ್ಮ ಹರಕೆ ತೀರಿಸುವ ಸಲುವಾಗಿ ಇಂದು ಮತ್ತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿಶೇಷ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ನಿವಾಸದಲ್ಲಿ ʻಟೀ ಪಾರ್ಟಿʼ – ಕೇಂದ್ರ ಸಚಿವರು, ಬಿಜೆಪಿ ಸಂಸದರ ಭೇಟಿ
ಪತಿ ದರ್ಶನ್ ಹೆಸರಿನಲ್ಲಿ ಅಭಿಷೇಕ ಮತ್ತು ಅರ್ಚನೆ ನೆರವೇರಿಸಿದ ವಿಜಯಲಕ್ಷ್ಮಿ, ದೇವಿಗೆ ಉಡಿ ತುಂಬಿ ಹರಕೆ ತೀರಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಭೇಟಿಯಾಗಿ, ನಂತರ ಬೆಂಗಳೂರಿಗೆ ತೆರಳಿದ್ದಾರೆ. ಇದನ್ನೂ ಓದಿ: ಬಿಡದಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

