ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ(Vijayalakshmi Darshan) ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ಸ್ಟೋರಿ(Instagram story) ಇದೀಗ ಸೋಷಿಯಲ್ ಮೀಡಿಯಾದಲ್ಲಿ(Social Media) ಭಾರೀ ಚರ್ಚೆಗೆ ಕಾರಣವಾಗಿದೆ. ಅವರು ಹಂಚಿಕೊಂಡಿರುವ ಒಂದು ಸಾಲಿನ ಪೋಸ್ಟ್ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
“ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ… ಅದು ವಸ್ತುವಾಗಲಿ, ವ್ಯಕ್ತಿಯಾಗಲಿ” ಎಂದು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದಾರೆ. ದೇವಸ್ಥಾನಗಳಿಗೆ ಭೇಟಿ, ಫಾರ್ಮ್ಹೌಸ್, ಸಾಕುಪ್ರಾಣಿಗಳೊಂದಿಗೆ ಕಳೆದ ಕ್ಷಣಗಳು ಹಾಗೂ ದರ್ಶನ್ ಅವರೊಂದಿಗಿನ ಫೋಟೋಗಳನ್ನು ಆಗಾಗ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದರೆ, ಈ ಬಾರಿ ಅವರು ಹಂಚಿಕೊಂಡಿರುವ ಪೋಸ್ಟ್ ಮಾತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಾಲುಗಳನ್ನು ಯಾರನ್ನು ಉದ್ದೇಶಿಸಿ ಬರೆದಿದ್ದಾರೆ? ಇದರ ಹಿಂದಿನ ಅರ್ಥವೇನು? ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ.ಇದನ್ನೂ ಓದಿ; ಒರಟ ಶ್ರೀ ನಿರ್ದೇಶನದ ಶಬರಿ ಟೀಸರ್ ರಿಲೀಸ್
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಹಲವು ವದಂತಿಗಳ ನಡುವೆ ವಿಜಯಲಕ್ಷ್ಮಿ ಅವರ ಈ ಪೋಸ್ಟ್ ಗಮನ ಸೆಳೆಯುತ್ತಿದೆ. ಆದರೆ ಈ ಸ್ಟೋರಿಯ ಬಗ್ಗೆ ವಿಜಯಲಕ್ಷ್ಮಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಈ ಪೋಸ್ಟ್ ಈಗ ಸಿನಿ ವಲಯದಲ್ಲಿ ಹಾಗೂ ಅಭಿಮಾನಿಗಳ ನಡುವೆ ಚರ್ಚೆಯ ವಿಷಯವಾಗಿದೆ.ಇದನ್ನೂ ಓದಿ; ತಲೈವಾ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ‘ಜೈಲರ್- 2’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
