ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2 ನಲ್ಲಿ ಅಕ್ಟೋಬರ್ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕೂಚಿಪುಡಿ, ಡೊಳ್ಳು ಕುಣಿತ, ತಮಟೆ ವಾದ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ನಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು (Bengaluru) ವಿಮಾನ ನಿಲ್ದಾಣ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದನ್ನೂ ಓದಿ: ಯಾವತ್ತಿದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡುತ್ತಾರೆ – ಈಶ್ವರಪ್ಪ
Advertisement
Advertisement
ಅ.8ರಂದು ಯಕ್ಷಗಾನ, ತಮಟೆವಾದ್ಯ ಜರುಗಿತು. ಜೊತೆಗೆ ಜಾನಪದ ಗಾಯನ ಮತ್ತು ನೃತ್ಯರೂಪಕ ವಿದ್ವಾನ್ ರೂಪಶ್ರೀ ಮಧುಸೂದನ್ ಅವರಿಂದ ನೃತ್ಯ ಮತ್ತು ಸಂಗೀತ ಕಲಾ ಪ್ರದರ್ಶನ ಜರುಗಿತು. ಇದನ್ನೂ ಓದಿ: 70th National Film Awards: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
Advertisement
Advertisement
ಅ.9ರಂದು ಕರ್ನಾಟಕ ಸಂಗೀತ ಹಾಗೂ ನೃತ್ಯ ರೂಪಕ, ಅ.10ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕೂಚಿಪುಡಿ ನೃತ್ಯ ಪ್ರದರ್ಶನ, ಅ.11 ರಂದು ಬೊಂಬೆ ಪ್ರದರ್ಶನ ನಡೆಯಲಿದೆ. ಈ ಎಲ್ಲಾ ಸಾಂಪ್ರದಾಯಕ ಮನರಂಜನೆಯೊಂದಿಗೆ ದಸರಾ ಹಬ್ಬವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಣ್ತುಂಬಿಕೊಳ್ಳಬಹುದು. ಇದನ್ನೂ ಓದಿ: ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ