ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ತುಟ್ಟಿ ಭತ್ಯೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
Advertisement
ತುಟ್ಟಿ ಭತ್ಯೆ ಏರಿಕೆಯಿಂದ 8.5 ಲಕ್ಷ ಸರ್ಕಾರಿ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ನೌಕರರ ವೇತನ ಪರಿಷ್ಕರಣೆಯ ಬಳಿಕ ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ಹೀಗಾಗಿ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು.
Advertisement
ಗುರುವಾರ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜುಲೈ ತಿಂಗಳಿನಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಏರಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಸಿಎಂ ಪುರಸ್ಕರಿಸಿದ್ದು ಈಗ ತುಟ್ಟಿಭತ್ಯೆ ಏರಿಕೆಯಾಗಿದೆ.
Advertisement