ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ(Dasara) ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ.
Advertisement
ಸಾಂಸ್ಕೃತಿಕ ನಗರಿ ಮೈಸೂರು (Mysuru) ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ 2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ(Dasara Leave) ಅವಧಿಯನ್ನು ಮತ್ತೊಮ್ಮೆ ನಿಗದಿಪಡಿಸಲಾಗಿದ್ದು, ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ (Mahatma Gandhi Jayanti) ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು (Valmiki Jayanti) ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ(Education Department) ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಈ ಬಾರಿ ದಸರಾ ಉದ್ಘಾಟನೆ – ಸಿಎಂ
Advertisement
Advertisement
ವಿಶೇಷವೆಂದರೆ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಉದ್ಘಾಟಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ನಡೆಯುವ ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪುಷ್ಪಾರ್ಚನೆ ಸಲ್ಲಿಸಲು ಬರಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಆದರೆ ಮೈಸೂರು ದಸರಾದಲ್ಲಿ ಭಾಗವಹಿಸಲು ಮೋದಿ ಅವರು ಆಗಮಿಸುತ್ತಿಲ್ಲ ಎಂಬುವುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್(S. T. Somashekhar) ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್