ನೆಲಮಂಗಲ: ಸಾಲು ಸಾಲು ರಜೆ (Dasara Holiday) ಇರುವ ಹಿನ್ನೆಲೆಯಲ್ಲಿ ಬೆಂಗಳೂರು -ತುಮಕೂರು (Bengaluru-Tumakuru) ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಶುಕ್ರವಾರ ಆಯುಧ ಪೂಜೆ, ಶನಿವಾರ ವಿಜಯದಶಮಿ ಇರುವ ಕಾರಣ ಭಾರೀ ಸಂಖ್ಯೆಯಲ್ಲಿ ಊರಿನತ್ತ ಜನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದನ್ನೂ ಓದಿ: ಬೈಕ್ ಮೆಕಾನಿಕ್ ರಾತ್ರೋರಾತ್ರಿ ಕೋಟ್ಯಧಿಪತಿ – 25 ಕೋಟಿ ಬಹುಮಾನ ಗೆದ್ದ ಮಂಡ್ಯದ ಗಂಡು
Advertisement
Advertisement
ನೆಲಮಂಗಲ ಬಳಿ ಕಿಲೋಮೀಟರ್ ದೂರದವೆಗೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. ನೆಲಮಂಗಲ ಕುಣಿಗಲ್ ಬೈಪಾಸ್ ನಿಂದ ಅರಿಶಿನುಕುಂಟೆವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
Advertisement
ಪ್ರತಿಬಾರಿಯೂ ಹಬ್ಬ ಹರಿದಿನಗಳಲ್ಲಿ ಬೆಂಗಳೂರು- ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ. ಗೊರಗುಂಟೆ ಪಾಳ್ಯ ಮೂಲಕ 18 ಜಿಲ್ಲೆಗಳಿಗೆ ವಾಹನಗಳು ಸಂಚರಿಸುವ ಕಾರಣ ಈ ರಸ್ತೆಯಲ್ಲಿ ವಾಹನ ದಟ್ಟಣೆ ಯಾವಾಗಲೂ ಜಾಸ್ತಿ ಇರುತ್ತದೆ.
Advertisement