ಬೆಂಗಳೂರು: ಮೈಸೂರು ದಸರಾ (Mysuru Dasara) ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇವಲ ಮುಡಾ ವಿಚಾರದ ಜಪ ಮಾಡುತ್ತ ತಾವು ಮಾಡಿದ ತಪ್ಪುಗಳನ್ನು ಇಲ್ಲ, ಇಲ್ಲ ಎಂಬ ರೀತಿ ಭಾಷಣ ಮಾಡಿದ್ದಾರೆ. ಜೊತೆಯಲ್ಲಿ ಇರುವವರನ್ನು ಪ್ರೇರೇಪಿಸಿ ಪ್ರಮಾಣಪತ್ರ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಇದು ರಾಜ್ಯದ ಜನತೆಗೆ ಮಾಡಿದ ಅಪಮಾನ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ಷೇಪಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಇದೊಂದು ನಾಚಿಕೆಗೇಡಿನ ಸಂಗತಿ. ಇಂಥ ವೇದಿಕೆಗಳನ್ನು ತಮ್ಮ ರಾಜಕೀಯ ತೆವಲನ್ನು ತೀರಿಸಿಕೊಳ್ಳಲು ಬಳಸಿಕೊಳ್ಳಬಾರದು. ರಾಜ್ಯ ಕನ್ನಡಕ್ಕೆ ಕೊಡುಗೆ ಕೊಟ್ಟ ಮುತ್ಸದ್ದಿಗಳಿಂದ ದಸರಾ ಉತ್ಸವ ಉದ್ಘಾಟಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ
Advertisement
Advertisement
ದಸರಾ ಸಡಗರ ನಿನ್ನೆಯಿಂದ ಪ್ರಾರಂಭವಾಗಿದೆ. ಮೈಸೂರಿನ ವೈಭವ, ಮೈಸೂರು ರಾಜರ ಕೊಡುಗೆ, ರಾಜ್ಯದ ಇತಿಹಾಸ ಸ್ಮರಣೆ, ಚಾಮುಂಡಿ ತಾಯಿಯ ವಿಚಾರ ಸ್ಮರಿಸಬೇಕಿತ್ತು ಎಂದರು. ಕಾಂಗ್ರೆಸ್ಸಿನ (Congress) ಪ್ರಮುಖರಾದ ಪರಮೇಶ್ವರ್, ಕೃಷ್ಣಬೈರೇಗೌಡ, ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ ಅವರು ಪತ್ರಿಕಾಗೋಷ್ಠಿ ಮಾಡಿದ್ದರು. ಅವರು ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ. ಆರ್.ಅಶೋಕ್ ಅವರು ವಿಪಕ್ಷ ನಾಯಕರಾಗಿದ್ದು, ಹಿಂದೆ ಆದ ಘಟನೆಯನ್ನು ತೆಗೆದು ಅವರು ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ. ಸತ್ತು ಹೋದ ಕಥೆಯನ್ನು ತೆಗೆದು ಏನು ರಾಜೀನಾಮೆ ಕೇಳುತ್ತೀರಿ? ಮುಡಾ ಕೇಸಿಗೂ ಈ ಮುಗಿದು ಹೋದ ಕಥೆಗೂ ನೀವು ತಾಳೆ ಹಾಕುತ್ತಿದ್ದೀರಿ ಎಂದು ಟೀಕಿಸಿದರು. ಇದನ್ನೂ ಓದಿ: 5,600 ಕೋಟಿ ಮೌಲ್ಯದ ಕೊಕೇನ್ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡ – ನಾಚಿಕೆಗೇಡು ಎಂದ ಅಮಿತ್ ಶಾ
Advertisement
ಇದು ಸರಿಯಾದ ರೀತಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದ ಅವರು, ಮುಡಾ ಕೇಸಿನಲ್ಲಿ (MUDA Scam Case) ತನಿಖೆಗೆ ಎರಡು ಕೋರ್ಟ್‌ಗಳ ಆದೇಶ ಆಗಿದೆ. ಇಡಿ ಈಗಾಗಲೇ ಅದರಲ್ಲಿ ಪ್ರವೇಶ ಆಗಿದೆ. ನೀವು ಸೈಟ್‌ಗಳನ್ನು ವಾಪಸ್ ಕೊಟ್ಟರೂ ಒಂದೇ, ಕೊಡದಿದ್ದರೂ ಒಂದೇ. ಮುಡಾದವರು ಈ ಸೈಟ್‌ಗಳನ್ನು ವಾಪಸ್ ಪಡೆಯಬಾರದಿತ್ತು. ಕೋರ್ಟಿನಲ್ಲಿರುವಾಗ ಮುಡಾ ಮಾಡಿರುವುದು ಕೂಡ ತಪ್ಪೇ ಆಗಿದೆ. ಆರ್.ಅಶೋಕ್ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಮುಡಾ ವಿಚಾರದಲ್ಲಿ ತನಿಖೆ ಆಗಲಿದೆ. ಮುಖ್ಯಮಂತ್ರಿಗಳು ಇದರಲ್ಲಿ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್
Advertisement
ಎಚ್‌ಡಿಕೆ ವಿರುದ್ಧ ಕೇಸಿನ ಕುರಿತು ಮಾತನಾಡಿದ ಅವರು, ಇದು ಕಾಂಗ್ರೆಸ್ ಸಂಸ್ಕೃತಿ. ಖೆಡ್ಡಾ ತೋಡಿ ಕೆಲವರನ್ನು ಹಳ್ಳಕ್ಕೆ ಬೀಳಿಸುವ ಕೆಲಸ ಪ್ರಾರಂಭ ಮಾಡಿದ್ದಾರೆ ಬಿಜೆಪಿ- ಜೆಡಿಎಸ್ ಅಂದರೆ ಎನ್‌ಡಿಎ ಮಿತ್ರಕೂಟದ ಮೇಲೆ ಆರೋಪ ಹೊರಿಸಲು ಕಾಂಗ್ರೆಸ್ಸಿನಲ್ಲಿ ಒಂದು ಪಡೆಯೇ ಸಿದ್ಧವಾಗಿದೆ. ಎರಡೂ ಪಕ್ಷದ ಮುಖಂಡರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ