ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪದಲ್ಲಿ ಅಕ್ಟೋಬರ್ 14 ಮತ್ತು 15ರಂದು ನಡೆಯಲಿರುವ ಆಯುಧ ಪೂಜೆ ಮತ್ತು ದಸರಾ ಕಾರ್ಯಕ್ರಮ ಹಾಗೂ ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
Advertisement
ಮಡಿಕೇರಿ ಗೋಣಿಕೊಪ್ಪದಲ್ಲಿ ಈ ಬಾರಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅಕ್ಟೋಬರ್ 14ರ ಬೆಳಗ್ಗೆ 6ಗಂಟೆಯಿಂದ 16ರ ಬೆಳಗ್ಗೆ 6ಗಂಟೆಯವರೆಗೆ ಮಡಿಕೇರಿ ನಗರ ಠಾಣೆ ಮತ್ತು ಗೋಣಿಕೊಪ್ಪ ಠಾಣೆ ಸರಹದ್ದಿನ 10 ಕಿ.ಮೀ.ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ
Advertisement
Advertisement
ಮತ್ತೊಂದಡೆ ಅಕ್ಟೋಬರ್ 17ರಂದು ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಹಿನ್ನೆಲೆ ಅಕ್ಟೋಬರ್ 16ರ ಬೆಳಗ್ಗೆ 6 ಗಂಟೆಯಿಂದ 18ರ ಬೆಳಗ್ಗೆ 6 ಗಂಟೆಯವರೆಗೆ ಭಾಗಮಂಡ ಠಾಣಾ ಸರಹದ್ದಿನ 20 ಕಿ.ಮೀ. ವ್ಯಾಪ್ತಿಯೊಳಗೆ ಬರುವ (ಚೇರಂಬಾಣೆ ಸೇರಿದಂತೆ) ಎಲ್ಲಾ ಗ್ರಾಮಗಳಲ್ಲಿರುವ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಕ್ಲಬ್, ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ
Advertisement