ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಮರಣಾರ್ಥ ನಡೆಯಬೇಕಿದ್ದ 3ನೇ ವರ್ಷದ ಪುಣ್ಯ ಸ್ಮರಣೆ ದಿನವನ್ನು ಸರಳ ಪೂಜೆ, ಉತ್ಸವ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.
Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 21 ರಂದು ಶಿವಕುಮಾರ ಸ್ವಾಮಿಗಳ 3ನೇ ವರ್ಷದ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಣೆ ಮಾಡಬೇಕು ಅಂತ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಿಗೆ ಆದೇಶ ನೀಡಿತ್ತು. ಆದರೆ ಕೋವಿಡ್ 3 ನೇ ಅಲೆಯಿಂದಾಗಿ ಸಿದ್ದಗಂಗಾ ಮಠದಲ್ಲಿ ಸರಳ ಪೂಜೆ, ಉತ್ಸವ ಮಾಡಲು ನಿರ್ಧರಿಸಿದ್ದೇವೆ. ಸರ್ಕಾರದಿಂದಲೇ ದಾಸೋಹ ದಿನದ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಮಠದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮ ಇಲ್ಲ ಎಂದು ನುಡಿದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್
Advertisement
Advertisement
ಈಗಾಗಲೇ ನಿಗದಿಯಾಗಿದ್ದ ಅನೇಕ ಕಾರ್ಯಕ್ರಮಗಳು ರದ್ದಾಗಿವೆ. ಇಂತಹ ಸಂದರ್ಭದಲ್ಲಿ ನಾವೇಲ್ಲ ಯೋಚನೆ ಮಾಡಬೇಕಾಗುತ್ತದೆ ಎಂದರು. ಇದನ್ನೂ ಓದಿ: ಕಾಲಭೈರವನಿಗೆ ಪೊಲೀಸ್ ಸಮವಸ್ತ್ರ – ಫೋಟೋ ವೈರಲ್
Advertisement