ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ (Belagavi) ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮಾ. 15ರಂದು ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮಾ. 15ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ಸಾಮಾನ್ಯ ಪುರುಷ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಇರುತ್ತದೆ. ಇದನ್ನೂ ಓದಿ: ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ರೂಲ್ಸ್ – ಇನ್ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆ
Advertisement
ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ಮಧ್ಯೆ ರಾಜಕೀಯ ಕುಸ್ತಿಗೆ ಮೇಯರ್, ಉಪಮೇಯರ್ ಚುನಾವಣೆ ಸಾಕ್ಷಿಯಗಲಿದೆ ಎನ್ನುವ ಲೆಕ್ಕಾಚಾರಗಳು ಬೆಳಗಾವಿಯಲ್ಲಿ ಕೇಳಿಬರುತ್ತಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪ್ರತಿಷ್ಠೆಯ ಕಣವಾಗಿ ಈ ಚುನಾವಣೆ ಮಾರ್ಪಟ್ಟಿದೆ.
Advertisement
Advertisement
ಇಬ್ಬರು ಸದಸ್ಯರ ಸದಸ್ಯತ್ವ ರದ್ದಾದರೂ ಸಹ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಆದರೆ ವಿಜಯಪುರ ಮಾದರಿಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಹೆಚ್ಚಿಸಿಕೊಂಡರೆ ಅಚ್ಚರಿ ಫಲಿತಾಂಶ ಖಚಿತ ಎನ್ನುತ್ತಿದ್ದಾರೆ. ಇಬ್ಬರು ಸದಸ್ಯರ ಸದಸ್ಯತ್ವ ರದ್ದಾಗಿರುವುದರಿಂದ ಪಾಲಿಕೆಯ ಒಟ್ಟು ಸಂಖ್ಯಾ ಬಲ 56ಕ್ಕೆ ಕುಸಿದಿದೆ. ಇದನ್ನೂ ಓದಿ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ – ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ
Advertisement
ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಶಾಸಕರು, ಸಂಸದರು, ಪರಿಷತ್ ಸದಸ್ಯರು ಮತದಾನ ಮಾಡುವ ಹಕ್ಕು ಹೊಂದಿರುತ್ತಾರೆ. ನಾಗರಾಜ್ ಯಾದವ್ ಜಿಲ್ಲೆಯ ಕೆಡಿಪಿ ಸಭೆಯಲ್ಲಿ ನಿರಂತರವಾಗಿ ಪಾಲ್ಗೊಳುತ್ತಿದ್ದಾರೆ. ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣ ಸಂದರ್ಭ ಉಮಾಶ್ರೀ ಸಹ ಬೆಳಗಾವಿಯಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಪಕ್ಷೇತರ ಎಂಎಲ್‌ಸಿ ಲಖನ್ ಜಾರಕಿಹೊಳಿ ಬೆಳಗಾವಿಯನ್ನು ಪ್ರತಿನಿಧಿಸುತ್ತಾರೆ.
ಮೇಯರ್ ಚುನಾವಣೆಯ ಮತದಾರರ ಪಟ್ಟಿ ಮೇಲೆ ಕಾಂಗ್ರೆಸ್ ಭವಿಷ್ಯ ನಿಂತಿದೆ. ಸಂಖ್ಯಾಬಲ ಹೆಚ್ಚಿಸಿಕೊಂಡರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬಹುದೆಂಬ ಲೆಕ್ಕಚಾರಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದನ್ನೂ ಓದಿ: ಪಾಕ್‌ನ ಬಲೂಚಿಸ್ತಾನದಲ್ಲಿ IED ಸ್ಫೋಟ – 5 ಮಂದಿ ಸಾವು