ಚಿಕ್ಕಮಗಳೂರು: ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ (Datta Jayanthi) ಕಾರ್ಯಕ್ರಮಕ್ಕೆ ಇಂದು (ಭಾನುವಾರ) ಅಧಿಕೃತ ಚಾಲನೆ ದೊರೆತಿದೆ. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ.ಟಿ.ರವಿ (C.T.Ravi) ಜೊತೆ 300 ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ಮಾಡುವ ಮೂಲಕ 10 ದಿನಗಳ ದತ್ತಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ.
ಕಳೆದ ವರ್ಷಕ್ಕಿಂತ ಈ ಬಾರಿ ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತ ಭಕ್ತರು ಮಾಲಾಧಾರಣೆ ಮಾಡಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಕಾಫಿನಾಡು ಬೂದಿ ಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿ ಹದ್ದಿನ ಕಣ್ಣಿಟ್ಟಿದೆ. ಇದನ್ನೂ ಓದಿ: ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ
Advertisement
Advertisement
ಇದೇ 24ರ ಭಾನುವಾರದಂದು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಿ ದತ್ತಪೀಠದಲ್ಲಿ ಹೋಮ-ಹವನ ನಡೆಸುವ ಮೂಲಕ ಅನುಸೂಯ ಜಯಂತಿ ಆಚರಿಸಲಿದ್ದಾರೆ. ಡಿ.25 ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು 20 ಸಾವಿರಕ್ಕೂ ಅಧಿಕ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement
ಡಿ.26 ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಕೊನೆ ಮೂರು ದಿನ ದತ್ತಜಯಂತಿಯ ಸೂಕ್ಷ್ಮ ದಿನವಾಗಿದ್ದು ಜಿಲ್ಲಾದ್ಯಂತ ಸಾವಿರಾರು ಪೊಲೀಸರ ಹದ್ದಿನ ಕಣ್ಣಿಡಲಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಚಿಕ್ಕಮಗಳೂರು ಬೂದಿ ಮುಚ್ವಿದ ಕೆಂಡದಂತಿರಲಿದೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್, ಡಿ-ಗ್ರೂಪ್ ನೌಕರರ ಅಮಾನತಿಗೆ ಸೂಚನೆ