ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarang Dal) ವತಿಯಿಂದ ಡಿ.17 ರಿಂದ ಡಿ.26ರವರೆಗೆ ದತ್ತ ಜಯಂತಿ (Datta Jayanti) ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನಿರಂತರ ಹೋರಾಟದಿಂದ ದತ್ತಪೀಠದಲ್ಲಿ ಈಗಾಗಲೇ ತ್ರಿಕಾಲ ಪೂಜೆ ನಡೆಯುತ್ತಿದೆ. 2023ರಲ್ಲಿ ದತ್ತ ಜಯಂತಿಯನ್ನು ಕರ್ನಾಟಕ ನಾಡ ಉತ್ಸವದಂತೆ ಆಚರಿಸಲು ಸಂಘಟನೆ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್!
Advertisement
Advertisement
ಈ ಬಾರಿಯ ದತ್ತಜಯಂತಿಗೆ ರಾಜ್ಯದ ವಿವಿಧ ಭಾಗಗಳಿಂದ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಡಿ.17ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲಾಧಾರಣೆ ನಡೆಯಲಿದೆ. ಡಿ.24ರಂದು ಅನುಸೂಯ ಜಯಂತಿ ನಡೆಯಲಿದ್ದು, ಆ ದಿನ ಬೆಳಗ್ಗೆ 9:30ಕ್ಕೆ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ದತ್ತಪೀಠದಲ್ಲಿ ಗಣಪತಿ ಪೂಜೆ, ಪುಣ್ಯಹವಾಚನ, ಪಂಚಗವ್ಯ ಶುದ್ಧಿ, ಗಣಪತಿ ಹೋಮ, ದುರ್ಗಾಹೋಮ, ಕಲಶಾಭಿಷೇಕ, ಹಾಗೂ ಮಹಾಪೂಜೆ ಜರುಗಲಿದೆ. ಸಂಜೆ ಪಾದುಕಾಶುದ್ಧಿ, ಪ್ರಕಾರ ಶುದ್ಧಿ, ಸುದರ್ಶನ ಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?
Advertisement
Advertisement
ಡಿ.25ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಾಧು-ಸಂತರು, ಸ್ವಾಮೀಜಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹಕಾರ್ಯದರ್ಶಿ ಶಂಕರ್ ಗಾಯ್ಕರ್ ಭಾಗವಹಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ನವಕಲಶ ಕಲಾವಾಹನಂ, ಕಲಾತತ್ವಾದಿವಾಸ ಪೂಜೆ, ಕಲಾಹೋಮ, ರುದ್ರಹೋಮ, ಕಲಶಾಭೀಷೇಕ ಮಹಾಪೂಜೆ ನಡೆಸಲು ಸಂಘಟನೆ ತೀರ್ಮಾನಿಸಿದೆ. ಡಿ.26ರಂದು ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವರು. ಅಲ್ಲಿ ದತ್ತಾತ್ರೇಯ ಮಹಾಮಂತ್ರ, ಮಹಾಯಾಗ, ಕಲಶಾಭಿಷೇಕ, ಮಹಾಪೂಜೆ, ತಂತ್ರಿಗಳಿಂದ ಆಶೀರ್ವಚನಾ, ಬ್ರಹ್ಮಭೋಜನ, ಪ್ರಸಾದ ವಿನಿಯೋಗ ನಡೆಯಲಿದೆ. ದತ್ತಜಯಂತಿಯನ್ನು ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದ್ದು, ಜಿಲ್ಲಾಡಳಿತ ಹೈಕೋರ್ಟ್ ಆದೇಶದಂತೆ ಸೌಕರ್ಯವನ್ನು ಒದಗಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಾಗರ್ ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ: ಆರೋಪಿ ಮಗನ ಬಗ್ಗೆ ತಾಯಿ ಹೇಳಿದ್ದೇನು?