ಚಿಕ್ಕಮಗಳೂರು: ದತ್ತಪೀಠದ (Datta Peeta) ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಆರೋಪಿಗಳು ನ್ಯಾಯಾಲಯಕ್ಕೆ (Court) ಹಾಜರಾಗಿದ್ದಾರೆ.
2017ರ ಡಿ.3 ರಂದು ನಡೆದಿದ್ದ ದತ್ತಪೀಠದ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಹಿಂದೂ ಕಾರ್ಯಕರ್ತರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇಂದು (ಸೋಮವಾರ) ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇದನ್ನೂ ಓದಿ: ಬಿಲ್ಕಿಸ್ ಬಾನೋ ಗ್ಯಾಂಗ್ ರೇಪ್ ಕೇಸ್ – ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ಆದೇಶ ರದ್ದು
Advertisement
Advertisement
2017ರಲ್ಲಿ ಕಾಂಗ್ರೆಸ್ (Congress) ಸರ್ಕಾರದ ಅವಧಿಯಲ್ಲಿ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿಯ ದರ್ಗಾದ ವಿಚಾರವಾಗಿ ದತ್ತಜಯಂತಿ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಉದ್ರಿಕ್ತರ ಗುಂಪು ಗೋರಿಗಳನ್ನು ಧ್ವಂಸಗೊಳಿಸಿತ್ತು. ಈ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ, 2023ರ ಅ.24ರಂದು ಚಿಕ್ಕಮಗಳೂರು (Chikkamagaluru) ಗ್ರಾಮಾಂತರ ಪೊಲೀಸರು (Police) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
Advertisement
Advertisement
ನ್ಯಾಯಾಲಯದ ಕಲಾಪ ಮುಗಿದ ಬಳಿಕ ಕೋರ್ಟ್ ಪಕ್ಕದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಹಿಂದೂ ಕಾರ್ಯಕರ್ತರು ಸಕಾರದ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರು ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ – ವಿಶ್ವನಾಥ್ ಕಿಡಿ