ರಾಯಪುರ: ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ- 1956ರ ನಿಬಂಧನೆಗಳ ಅಡಿಯಲ್ಲಿ ಅವಿವಾಹಿತ ಹೆಣ್ಣುಮಗಳು ಪೋಷಕರಿಂದ ವಿವಾಹದ ವೆಚ್ಚ ಪಡೆಯಬಹುದು ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ.
35 ವರ್ಷದ ರಾಜೇಶ್ವರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಿಲಾಸ್‌ಪುರದ ಹೈಕೋರ್ಟ್ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. ಈ ವೇಳೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು 2016ರ ಏಪ್ರಿಲ್ 22ರಂದು ನೀಡಿದ ಆದೇಶವನ್ನು ವಜಾಗೊಳಿಸಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು
Advertisement
Advertisement
ಭಿಲಾಯಿ ಸ್ಟೀಲ್ ಪ್ಲಾಂಟ್ (ಬಿಎಸ್‌ಪಿ) ಉದ್ಯೋಗಿ ಭುನುರಾಮ್ ಅವರ ಪುತ್ರಿ, ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ-1956ರ ಅಡಿಯಲ್ಲಿ ದುರ್ಗ್ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರತಿವಾದಿ (ತಂದೆ) ಭಾನುರಾಮ್ ಅವರು ನಿವೃತ್ತಿ ಹೊಂದಲಿದ್ದು, ಅವರು 55 ಲಕ್ಷ ಪಿಂಚಣಿ ಪಡೆಯುವ ಸಾಧ್ಯತೆಯಿದೆ. ಹಾಗಾಗಿ, ಜೀವನಾಂಶಕ್ಕಾಗಿ 20 ಲಕ್ಷ ರೂ. ನೀಡುವಂತೆ ಸೂಕ್ತ ರಿಟ್ ಹೊರಡಿಸಬೇಕು ಎಂದೂ ಹೇಳಿದ್ದರು. ಅರ್ಜಿಯನ್ನು ವಿಚಾರಿಸಿದ ಕೌಟುಂಬಿಕ ನ್ಯಾಯಾಲಯವು ಜನವರಿ 7, 2016 ರಂದು ಇದಕ್ಕೆ ಅವಕಾಶವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: ಹಿಜಬ್ ತೀರ್ಪು- ಹೈಕೋರ್ಟ್ ಜಡ್ಜ್‌ಗಳಿಗೆ ʼವೈʼ ಭದ್ರತೆ
Advertisement
ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜೇಶ್ವರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವಿವಾಹಿತ ಮಗಳು ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ-1956ರ ಕಾಯ್ದೆಯ ಅಡಿಯಲ್ಲಿ ತನ್ನ ಮದುವೆಯ ವೆಚ್ಚವನ್ನು ಪೋಷಕರಿಂದ ಪಡೆದುಕೊಳ್ಳಬಹುದು ಎಂದು ಅರ್ಜಿದಾರರ ಪರ ವಕೀಲ ಎ.ಕೆ.ತಿವಾರಿ ವಾದಿಸಿದ್ದರು. ಮಾರ್ಚ್ 21ರಂದು ವಿಚಾರಣೆಗೆ ಅಂಗೀಕರಿಸಿದ್ದ ನ್ಯಾಯಮೂರ್ತಿಗಳಾದ ಗೌತಮ್ ಭಾದುರಿ ಹಾಗೂ ಸಂಜಯ್ ಎಸ್.ಅಗರವಾಲ್ ಅವರ ವಿಭಾಗೀಯ ಪೀಠವು, ಕಾನೂನಿನ ಪ್ರಕಾರ ಅವಿವಾಹಿತ ಮಗಳು ತನ್ನ ತಂದೆಯಿಂದ ಮದುವೆಯ ವೆಚ್ಚವನ್ನು ಪಡೆಯಬಹುದು ಎಂದು ತೀರ್ಪು ಪ್ರಕಟಿಸಿತು.
Advertisement