ಮೈಸೂರು: ಪ್ರೀತಿಸಿದ (Love) ಯುವಕನೊಂದಿಗೆ ಮಗಳು ಮನೆಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು (Mysuru) ಜಿಲ್ಲೆ ಹೆಚ್‌ಡಿ ಕೋಟೆ (HD Kote) ತಾಲೂಕಿನ ಬಂದನೂರಿನಲ್ಲಿ ಘಟನೆ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಮಗಳು ಹರ್ಷಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದಳು. ಈ ಹಿನ್ನೆಲೆ ಮನನೊಂದ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್
ಬೂದನೂರು ಕೆರೆಯ ಏರಿ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿಗಳು ಪತ್ತೆಯಾಗಿದೆ. ಈ ಹಿನ್ನೆಲೆ ಕೆರೆಯಲ್ಲಿ ಹುಡುಕಾಟ ನಡೆಸಲಾಗಿದೆ. ಸದ್ಯ ಮೂವರ ಮೃತದೇಹ ಪತ್ತೆಯಾಗಿದ್ದು, ಕೆರೆಯಿಂದ ಹೊರತೆಗೆಯಲಾಗಿದೆ. ಹೆಚ್‌ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!