– ಅಪಹರಿಸಿ, 20 ಲಕ್ಷ ರೂ. ಬೇಡಿಕೆ ಇಟ್ಟಿರುವ ಆರೋಪ
ಹೈದರಾಬಾದ್: ತೆಲಂಗಾಣದ ಅಪಾರ್ಟ್ಮೆಂಟ್‌ವೊಂದರಲ್ಲಿ ನಾಪತ್ತೆಯಾಗಿದ್ದ 5 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೌಕೂರ್‌ನಲ್ಲಿ (Kowkoor) ನಡೆದಿದೆ.
ಬಾಲಕಿಯನ್ನು ಕೃಷಿ ವಿಜ್ಞಾನಿಯೊಬ್ಬರ ಮಗಳು ಎಂದು ಗುರುತಿಸಲಾಗಿದ್ದು, ಅದೇ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ವಿಕ್ರಮ ಶಂಕಿತ ಆರೋಪಿಯಾಗಿದ್ದು, ಬಾಲಕಿಯನ್ನು ಅಪಹರಿಸಿ ಆಕೆಯ ಬಿಡುಗಡೆಗಾಗಿ 20 ಲಕ್ಷ ರೂ. ಬೇಡಿಕೆ ಇಟ್ಟಿದ್ದಾಗಿ ತಿಳಿದುಬಂದಿದೆ. ಇದನ್ನೂ ಓದಿ: ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ
ಶನಿವಾರ (ಅ.10) ಬಾಲಕಿ ನಾಪತ್ತೆಯಾಗಿದ್ದಳು. ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತ್ರೀವ ಶೋಧ ನಡೆಸಿದಾಗ ರಾತ್ರಿ 9 ಗಂಟೆ ಸುಮಾರಿಗೆ ಬಾಲಕಿ ಅದೇ ಅಪಾರ್ಟ್ಮೆಂಟ್‌ನ ಕ್ಲಬ್‌ಹೌಸ್‌ನ ನೆಲಮಾಳಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಸಿಸಿಟಿವಿಯನ್ನು ಪರಿಶೀಲನೆ ನಡೆಸಿದಾಗ ಸೆಕ್ಯೂರಿಟಿ ಗಾರ್ಡ್ ಬಾಲಕಿಯನ್ನು ಹಿಂಬಾಲಿಸುತ್ತಿರುವುದು ಹಾಗೂ ಘಟನೆ ನಡೆಯುವುದಕ್ಕಿಂತ ಎರಡು ದಿನದ ಹಿಂದೆ ಆತ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ.
ಸದ್ಯ ಸೆಕ್ಯೂರಿಟಿ ಗಾರ್ಡ್ ಪರಾರಿಯಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು 10 ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಮೊಬೈಲ್ ಲೊಕೇಶನ್ ಪ್ರಕಾರ, ಘಟನೆಯ ಬಳಿಕ ಶಂಕಿತ ಆರೋಪಿ ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಕಡೆಗೆ ತೆರಳಿರಬಹುದು ಎಂದು ತಿಳಿದುಬಂದಿದೆ. ಆತನ ಚಲನವಲನಗಳನ್ನು ಪತ್ತೆಹಚ್ಚಲು ಮತ್ತು ಮಗುವಿಗೆ ಏನಾಯಿತು ಎಂಬುದನ್ನು ಸ್ಪಷ್ಟಪಡಿಸಿಕೊಳ್ಳಲು ತನಿಖಾಧಿಕಾರಿಗಳು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೊಲ್ಲಾರಂ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಡೇಟಾ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ದಸರಾ ಉದ್ಘಾಟಿಸಲು ಬಂದಿಲ್ಲ, ನಾಡಿಗಾಗಿ ಪ್ರಾರ್ಥಿಸಲು ಬಂದಿದ್ದೇನೆ: ಗವಿಸಿದ್ದೇಶ್ವರ ಶ್ರೀ

