ಪಾಟ್ನಾ: ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡ ಕಾಯಿಲೆ (kidney) ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಆರ್‌ಜೆಡಿ (ರಜದ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಪುತ್ರಿ ರೋಹಿಣಿ ಆಚಾರ್ಯ (Rohini Aacharya) ತಮ್ಮ ಕಿಡ್ನಿಯಲ್ಲಿ ಒಂದನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ಲಾಲು ಪ್ರಸಾದ್ ಯಾದವ್ ಹೊಸ ಜೀವನವನ್ನು ಪಡೆದುಕೊಳ್ಳಲಿದ್ದಾರೆ.
ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ (Singapore) ಭೇಟಿ ಕೊಟ್ಟ ಲಾಲು ಪ್ರಸಾದ್ ಯಾದವ್ ಅವರಿಗೆ, ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಬಳಿಕ ರೋಹಿಣಿ ಅವರು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದಾರೆ.
Advertisement
Advertisement
ತಮ್ಮ ಜೀವವನ್ನು ಉಳಿಸಿಕೊಳ್ಳಲು ಮೊದಲಿಗೆ ರೋಹಿಣಿ ಕಿಡ್ನಿಯನ್ನು ಪಡೆಯಲು ಲಾಲು ಪ್ರಸಾದ್ ಒಪ್ಪಿಕೊಳ್ಳಲಿಲ್ಲ. ಆದರೆ ಆಕೆಯ ಮತ್ತು ಕುಟುಂಬಸ್ಥರ ಒತ್ತಡದ ಮೇರೆಗೆ ಕೊನೆಗೆ ಕಿಡ್ನಿ ಪಡೆಯಲು ಒಪ್ಪಿಕೊಂಡಿದ್ದಾರೆ. ನವೆಂಬರ್ 20 ರಿಂದ 24ರ ಒಳಗೆ ಲಾಲು ಅವರು ಮತ್ತೆ ಸಿಂಗಾಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದ್ದು, ಈ ಸಮಯದಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ – ಮಾಜಿ ಶಾಸಕ ಬಸವರಾಜನ್ ವಶಕ್ಕೆ
Advertisement
Advertisement
ಲಾಲು ಪ್ರಸಾದ್ ಅವರ ಎರಡನೇ ಪುತ್ರಿಯಾಗಿರುವ ರೋಹಿಣಿ ಅವರು ಸಿಂಗಾಪುರದಲ್ಲಿ ನೆಲೆಸಿದ್ದು, ತಮ್ಮ ತಂದೆಗೆ ಮೂತ್ರಪಿಂಡ ಕಾಯಿಲೆ ಸಮಸ್ಯೆ ಇರುವ ಬಗ್ಗೆ ಬಹಳ ಆತಂಕಕ್ಕೊಳಗಾಗಿದ್ದರು. ನಂತರ ಮೂತ್ರಪಿಂಡ ಕಸಿ ಸಲಹೆ ನೀಡಿದ ವೈದ್ಯರ ತಂಡವನ್ನು ಸಂಪರ್ಕಿಸಲು ಲಾಲು ಪ್ರಸಾದ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದರು.
ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಗೆ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್‍ಗೆ ಎಐಐಎಂಎಸ್‍ನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳಲು ಸಲಹೆ ನೀಡಿರಲಿಲ್ಲ. ಆದರೆ ಸಿಂಗಾಪುರಕ್ಕೆ ಭೇಟಿ ನೀಡಿದ ಲಾಲು ಅವರಿಗೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ