ನವದೆಹಲಿ: ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅವರು ಇಂದು ಬೆಳಿಗ್ಗೆ ದೆಹಲಿ ಕಂಟೋನ್ಮೆಂಟ್‍ನ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ತಮ್ಮ ಪೋಷಕರ ಚಿತಾಭಸ್ಮವನ್ನು ಸ್ವೀಕರಿಸಿದರು.
Advertisement
ಬಿಪಿನ್ ರಾವತ್ ಮತ್ತು ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆಯನ್ನು ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ನಡೆಸಲಾಗಿತ್ತು. ಇದೀಗ ಅವರ ಚಿತಾಭಸ್ಮವನ್ನು ಉತ್ತರಾಖಂಡದ ಹರಿದ್ವಾರದಲ್ಲಿರುವ ಗಂಗಾ ನದಿಯಲ್ಲಿ ವಿಸರ್ಜಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ
Advertisement
Advertisement
ಶುಕ್ರವಾರ ಅಂತ್ಯಕ್ರಿಯೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಪಿನ್ ರಾವತ್ ಅವರ ಸೋದರ ಮಾವ ಯಶ್ ವರ್ಧನ್ ಸಿಂಗ್ ಅವರು, ನಾವು ಮುಂಜಾನೆ ಕಲಶದಲ್ಲಿ ಚಿತಾಭಸ್ಮವನ್ನು ತೆಗೆದುಕೊಂಡು ಹರಿದ್ವಾರಕ್ಕೆ ಹೋಗಿ ಪವಿತ್ರ ಗಂಗೆಯಲ್ಲಿ ಬಿಡುತ್ತೇವೆ ಮತ್ತು ಕೆಲವು ಧಾರ್ಮಿಕ ಕ್ರಿಯೆಗಳನ್ನು ನಡೆಸುವುದಾಗಿ ಹೇಳಿದ್ದಾರೆ.
Advertisement
Delhi: Kritika and Tarini, the daughters of #CDSGeneralBipinRawat and Madhulika Rawat collected the ashes of their parents from Brar Square crematorium, Delhi Cantonment this morning.
The immersion of their ashes will be done in Haridwar, Uttarakhand today. pic.twitter.com/ZxiAdZJJfq
— ANI (@ANI) December 11, 2021
ರಾವತ್ ಅವರ ಪುತ್ರಿಯರು ಇಂದು ಚಿತಾಭಸ್ಮ ಸ್ವೀಕರಿಸುವ ವೇಳೆ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಾಜ್ಯದ ಹಲವಾರು ಹಿರಿಯ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ಬಿಪಿನ್ ರಾವತ್ ದಂಪತಿ ಅಂತ್ಯಕ್ರಿಯೆ
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾದರು. ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರನ್ನು ಶುಕ್ರವಾರ ದೆಹಲಿ ಕಂಟೋನ್ಮೆಂಟ್‍ನ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.