ʻಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿʼ – ಪ್ರಚೋದನಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಕೇಸ್‌

Public TV
1 Min Read
KS Eshwarappa

ದಾವಣಗೆರೆ: ಸಂಸದ ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಅವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ (Davanagere) ನಡೆದ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನಾಯಕರನ್ನ (Congress Leaders) ಟೀಕಿಸುವ ಭರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಪಾಕ್‌ ಚುನಾವಣೆ; ಪಿಎಂಎಲ್‌-ಎನ್‌ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ

DK Suresh

ಈಶ್ವರಪ್ಪ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮುಖಂಡ ಹನುಮಂತ ಅವರು `ಪ್ರಾಣ ಬೆದರಿಕೆ ಹಾಗೂ ಪ್ರಚೋದನಕಾರಿ’ ಹೇಳಿಕೆ ಅಡಿಯಲ್ಲಿ ದೂರು ದಾಖಲಿಸಿದ್ದರು. ಕೈ ಮುಖಂಡನ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 505 (1) (C), 505 (2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಲ್ಲು ಅರ್ಜುನ್, ಫಹಾದ್ ಕಾಂಬಿನೇಷನ್ ಹೇಗಿರಲಿದೆ? ಸುಳಿವು ಬಿಟ್ಟು ಕೊಟ್ಟ ಸುಕುಮಾರ್

ಈಶ್ವರಪ್ಪ ಹೇಳಿದ್ದೇನು?
ದಾವಣಗೆರೆಯಲ್ಲಿ ಗುರುವಾರ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೆ.ಎಸ್‌ ಈಶ್ವರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಯಾವ ದೇಶದ ಅಧ್ಯಕ್ಷರಾಗಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಿ. ಅವರ ಪಕ್ಷದ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ದೇಶ ಇಬ್ಭಾಗ ಮಾಡಬೇಕು ಅಂತ ಹೇಳುತ್ತಿದ್ದಾರೆ. ತಮ್ಮ ಪಕ್ಷದ ಸಂಸದರೇ ಹೇಳಿದಂತೆ ನೀವು ಉತ್ತರ ಭಾರತದ ಅಧ್ಯಕ್ಷರಾ? ಅಥವಾ ದಕ್ಷಿಣ ಭಾರತದ ಅಧ್ಯಕ್ಷರಾ? ಕಾಂಗ್ರೆಸ್‌ನಲ್ಲಿರುವ ವಿನಯ್ ಕುಲಕರ್ಣಿ, ಡಿಕೆ ಸುರೇಶ್ ಇಬ್ಬರೂ ದೇಶದ್ರೋಹಿಗಳು. ತಾಕತ್ತಿದ್ದರೆ, ದೇಶದ್ರೋಹದ ಹೇಳಿಕೆ ನೀಡಿದ ಈ ಇಬ್ಬರನ್ನೂ ಪಕ್ಷದಿಂದ ಕಿತ್ತು ಬಿಸಾಕಿ ಎಂದು ಒತ್ತಾಯಿಸಿದರಲ್ಲದೇ, ಈ ರೀತಿ ದೇಶದ್ರೋಹ ಹೇಳಿಕೆ ನೀಡುವ, ದೇಶ ದ್ರೋಹ ಕೆಲಸ ಮಾಡುವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಒತ್ತಾಯಿಸಿದ್ದರು.

Share This Article