ದಾವಣಗೆರೆ: ಭದ್ರಾ ಡ್ಯಾಂ (Bhadra Dam) ನೀರು ಬಿಡುಗಡೆ ಮಾಡದೇ ಇರುವುದರಿಂದ ಕಂಗೆಟ್ಟ ರೈತರು (Farmers) ಇಂದು ದಾವಣಗೆರೆ ಬಂದ್‌ಗೆ (Davanagere Bandh) ಕರೆ ಕೊಟ್ಟಿದ್ದಾರೆ. ಭಾರತೀಯ ರೈತ ಒಕ್ಕೂಟ ಬಂದ್‌ಗೆ ಕರೆ ನೀಡಿದ್ದು, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ತಕ್ಷಣವೇ ಕುಡಿಯುವ ನೀರು ಮತ್ತು ರೈತರ ಬೆಳೆಗಳಿಗೆ ಭದ್ರಾ ನಾಲೆಯಿಂದ ನೀರು ಹರಿಸಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದಾರೆ. ಸಾರ್ವಜನಿಕರು, ವರ್ತಕರು ಮತ್ತು ಎಲ್ಲಾ ವರ್ಗದ ಜನರು ರೈತರ ಹಿತದೃಷ್ಟಿಯಿಂದ ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮುಂಜಾನೆಯಿಂದಲೇ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಪ್ರಮುಖ ಸರ್ಕಲ್‌ಗಳಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಪ್ರತಿ ವರ್ಷ ಹೋರಾಟ ಮಾಡಿಯೇ ನೀರು ಬಿಡಿಸಿಕೊಳ್ಳಬೇಕಾಗಿದೆ – ಸಚಿವರು, ಅಧಿಕಾರಿಗಳ ವಿರುದ್ಧ ರೈತರು ಗರಂ
ಭದ್ರಾ ಡ್ಯಾಮ್‌ನಲ್ಲಿ 175 ಅಡಿ ನೀರು ಇದ್ದರೂ ರೈತರ ಬೆಳೆಗಳಿಗೆ ನೀರು ಕೊಡದ ಸರ್ಕಾರ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಅಡಿಕೆ ಲಾಭಿಗಾಗಿ ಭದ್ರದಿಂದ ನೀರು ಬಿಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇನ್ನಾದರೂ ಭದ್ರಾ ನೀರು ಬಿಡುಗಡೆ ಮಾಡದೇ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ – ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ

