ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುವುದು ಸರಿಯಲ್ಲ-ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

Public TV
1 Min Read
DVG 2 1

ದಾವಣೆಗೆರೆ: ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆಯಲ್ಲಿ ತೊಂದರೆಯಾಗಬಾರದೆಂಬ ಹಿನ್ನೆಲೆಯಲ್ಲಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಮಾಡಲಾಗುತ್ತಿದೆ. ಆದರೆ ಅನಾವಶ್ಯಕವಾಗಿ ಮಾಜಿ ಪಾಲಿಕೆ ಸದಸ್ಯ ದಿನೇಶ್ ಕೆ ಶೆಟ್ಟಿ ಹಾಗೂ ಅವರ ಬೆಂಬಲಿಗರು ಅಡ್ಡಿಪಡಿಸಲು ಮುಂದಾಗಿರುವುದು ಖಂಡನೀಯ ಎಂದು ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂಗನಗೌಡ್ರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು, ಖಾಸಗಿ ಹಾಗೂ ಸರ್ಕಾರಿ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ ಹೈಸ್ಕೂಲ್ ಮೈದಾನದಲ್ಲಿ ಬಸ್ ನಿಲ್ದಾಣ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ನಾಗರೀಕರಿಗೆ, ಕ್ರೀಡಾಪಟುಗಳಿಗೆ ವಾಯುವಿಹಾರ ಮಾಡಲು ತೊಂದರೆಯಾಗುತ್ತದೆ ಎಂದು ಹೇಳುವ ಅವರು, ಈ ಹಿಂದೆ ಇದೇ ಮೈದಾನದಲ್ಲಿ ಶಾಮನೂರು ಶಿವಶಂಕರಪ್ಪ ಹಳೇ ಬಸ್ ನಿಲ್ದಾಣ ಸ್ಥಳಾಂತರಿಸುವಾಗ ಯಾವುದೇ ತೊಂದರೆಗಳು ಕಂಡುಬರಲಿಲ್ಲವೇ ಎಂದು ಪ್ರಶ್ನಿಸಿದರು. ಮೈದಾನದಲ್ಲಿ ಈ ಹಿಂದೆ ಶಾಶ್ವತವಾತ ಟೆನ್ನಿಸ್ ಕೋರ್ಟ್ ಹಾಗೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಮೂಲಕ ಜಾಗವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಕೆಎಸ್‍ಆರ್ ಟಿಸಿ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಶಾಸಕರ ಕುಟುಂಬದವರ ಹೆಸರಿಲ್ಲ ಎಂಬ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

DVG 1 1

ಪಾಲಿಕೆ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮಾತನಾಡಿ, ಬಸ್ ನಿಲ್ದಾಣವನ್ನು ಹೊರಭಾಗದಲ್ಲಿ ಮಾಡಿದರೆ ಸಾರ್ವಜನಿಕರಿಗೆ ಹೊರೆಯಾಗುತ್ತದೆ. ದಾವಣಗೆರೆಯ ಹೈಸ್ಕೂಲ್ ಮೈದಾನ ಮಧ್ಯಭಾಗವಾಗಿದ್ದು, ಎಲ್ಲರಿಗೂ ಅನುಕೂಲವಾಗುವಂತಿದೆ. ಅವರು ಟೆನ್ನಿಸ್ ಕೋರ್ಟ್ ನ್ನು ಶಾಶ್ವತವಾಗಿ ಮಾಡಿದಂತೆ ಬಸ್ ನಿಲ್ದಾಣವನ್ನು ಶಾಶ್ವತವಾಗಿ ಹೈಸ್ಕೂಲ್ ಮೈದಾನದಲ್ಲಿ ಮಾಡುವುದಿಲ್ಲ, ಪ್ರತಿನಿತ್ಯ 750 ಬಸ್ ಗಳು ಕೆಎಸ್‍ಆರ್ ಟಿಸಿ ನಿಲ್ದಾಣದಿಂದ ಹೋಗಿ ಬರುತ್ತವೆ. ಸುಮಾರು 15 ಸಾವಿರ ಜನರಿಗೆ ಇದರಿಂದ ಅನುಕೂಲವಿದೆ. ಸ್ವಯಂ ಪ್ರತಿಷ್ಟೆಗೆ ನಿಲ್ದಾಣ ಮಾಡುತ್ತಿಲ್ಲ, ಅಭಿವೃದ್ದಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದರು.

ಪಾಲಿಕೆ ಸದಸ್ಯ ಕೆ.ಪ್ರಸನ್ನಕುಮಾರ್ ಮಾತನಾಡಿ, ನಗರದ ಮಧ್ಯಭಾಗದಲ್ಲಿ ಸ್ಥಳವಿರುವುದರಿಂದ ಹೈಸ್ಕೂಲ್ ಮೈದಾನದಲ್ಲಿ ಬಸ್ ನಿಲ್ದಾಣ ಮಾಡುವುದು ಸೂಕ್ತವಿದೆ. ಒಂದು ವೇಳೆ ಹೊರಭಾಗದಲ್ಲಿ ನಿರ್ಮಾಣವಾದರೆ ಪ್ರಯಾಣಿಕರಿಗೆ ಅದರಲ್ಲೂ ರಾತ್ರಿ ವೇಳೆ ಮಹಿಳಾ ಪ್ರಯಾಣಿಕರು ಸಂಚರಿಸಲು ತೊಂದರೆಯಾಗುತ್ತದೆ. ಆಟೋಗಳಿಗೆ ಹೆಚ್ಚಿನ ಹಣ ವ್ಯಯ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

DVG 3

Share This Article
Leave a Comment

Leave a Reply

Your email address will not be published. Required fields are marked *