ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಪ್ರಸಂಗ ನಡೆದಿದೆ.
ಶಿವಗಂಗಾ ಬಸವರಾಜ್ (Shivaganga Basavaraj) ಅವರು ಚನ್ನಗಿರಿಯ ಗಡಿಯಲ್ಲಿ ರಸ್ತೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಇವರು ಬಿಜೆಪಿ (BJP) ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದರು.
ಇದೇ ಮೊದಲ ಬಾರಿಗೆ ಚುನಾವಣೆಗೆ ನಿಂತು ಶಿವಗಂಗಾ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣ ತಲುಪುವ ದಾರಿಯಲ್ಲಿ ರಸ್ತೆ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ಬಳಿಕ ಕಾರ್ಯಕರ್ತರ ಜೊತೆ ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ 8ರಲ್ಲಿ 6 ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಹೀನಾಯ ಸೋಲು
ದಾವಣಗೆರೆ (Davanagere) ಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಪಡೆದುಕೊಂಡಿದ್ದು, ಕೇವಲ ಒಂದು ಕ್ಷೇತ್ರ ಮಾತ್ರ ಬಿಜೆಪಿ ಪಾಲಿಗೆ ಒದಗಿ ಬಂದಿದೆ.