ದಾವಣಗೆರೆ: ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ. ಈ ಸ್ಥಾನವನ್ನು ನಿಭಾಯಿಸಲು ರಾಜ್ಯದಲ್ಲಿ ತುಂಬ ಜನರಿದ್ದಾರೆ. ಪರಮಮೇಶ್ವರ್ ಅವರು ಕೂಡ ಸಮರ್ಥ ನಾಯಕ. ಆದರೆ ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸುವುದು ಬೇಡ ಅಂತ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧ ಅಂತ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಜಿ.ಪರಮೇಶ್ವರ್ ಅವರು ಹೇಳಿದ ಮಾತಿನಲ್ಲಿ ಯಾವುದೇ ತಪ್ಪಿಲ್ಲ. ದೇಶ ಸ್ವತಂತ್ರವಾದ ಬಳಿಕ ಹಲವು ಸರ್ಕಾರಗಳು ಆಡಳಿತ ನಡೆಸಿವೆ. ಅನೇಕರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವಕಾಶ ಸಿಕ್ಕರೆ ಪರಮೇಶ್ವರ್ ಅವರು ಕೂಡ ಸಿಎಂ ಸ್ಥಾನ ನಿಭಾಯಿಸುವ ಕುರಿತು ಮಾತನಾದ್ದಾರೆ ಅಷ್ಟೇ ಎಂದು ತಿಳಿಸಿದ್ದಾರೆ.
ಕೇಂದ್ರದ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿ ಈಗಾಗಲೇ 100ಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಬರ ಪರಿಹಾರ ಕಾರ್ಯಕ್ಕಾಗಿ 16 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಅತಿವೃಷ್ಠಿಯಾಗಿರುವ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ನಯಾಪೈಸೆ ಅನುದಾನ ನೀಡಿರಲಿಲ್ಲ. ಅತಿವೃಷ್ಠಿ ವೇಳೆ 250 ಕೋಟಿ ರೂ. ರಾಜ್ಯ ಸರ್ಕಾರ ಭರಿಸಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.
ಡಿಸಿಎಂ ಹೇಳಿದ್ದೇನು?:
ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಈವರೆಗೂ ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕಿ ಬಿಟ್ಟ ವಿಚಾರ ಎಂದು ಬೆಳಗಾವಿಯಲ್ಲಿ ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews