Connect with us

Davanagere

ಕಿಚ್ಚನಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ – ಪೈಲ್ವಾನ್ ನೋಡಲು ಮುಗಿಬಿದ್ದ ಫ್ಯಾನ್ಸ್

Published

on

ದಾವಣಗೆರೆ: ಸ್ಯಾಂಡಲ್‍ವುಡ್ ಸ್ಟಾರ್ ನಟ ಸುದೀಪ್ ವಾಲ್ಮೀಕಿ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಭಿಮಾನಿಗಳು ನಟನನ್ನು ನೋಡಲು ಮುಗಿಬಿದ್ದಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ದಾವಣಗೆರೆಯ ರಾಜನಹಳ್ಳಿಯಲ್ಲಿ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ತಮ್ಮ ನೆಚ್ಚಿನ ಬರುತ್ತಿದ್ದಂತೆ, ಅಭಿಮಾನಿಗಳು ವೇದಿಕೆಯತ್ತ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲಾಟವಾಗಿದೆ. ಕುರ್ಚಿ, ಸೋಪಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು, ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಚಾರ್ಜ್ ಮಾಡಲಾಗಿದೆ.

ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ವಾಲ್ಮೀಕಿ ಶ್ರೀಗಳು ಸುದೀಪ್ ಅವರಿಗೆ ಪ್ರೀತಿಯಿಂದ ಸನ್ಮಾನ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *