ದಾವಣಗೆರೆ: ನಿನ್ನೆ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕ ಶವವಾಗಿ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆ ನಗರದ ಟಿವಿ ಸ್ಟೇಷನ್ ಕೆರೆಯಲ್ಲಿ ನಡೆದಿದೆ.
Advertisement
7 ವರ್ಷದ ಗಣ್ಯ ಮೃತ ಬಾಲಕ. ನಗರದ ಚಿಕ್ಕಮ್ಮಣಿ ದೇವರಾಜ್ ಅರಸು ಬಡವಾಣೆಯಯ ನಿವಾಸಿ ಗಣ್ಯ, ನಿನ್ನೆ ಮಧ್ಯಾಹ್ನ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಪಕ್ಕದ ಕೆರೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಬೀದಿ ಶ್ವಾನಗಳ ಹಾವಳಿ – ರೋಗಿಗಳಲ್ಲಿ ಆತಂಕ
Advertisement
Advertisement
ಬುದ್ಧಿಮಾಂದ್ಯ ಬಾಲಕನಾಗಿದ್ದ ಗಣ್ಯ, ತಮ್ಮ ದೊಡ್ಡಮ್ಮನ ಮನೆಯಿಂದ ತಿರುಗಾಡುತ್ತಾ ಕೆರೆಗೆ ಬಂದು ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕೆರೆಗೆ ಕಾಂಪೌಂಡ್ ಕಟ್ಟದ ಹಿನ್ನೆಲೆ ಬಾಲಕ ನೀರಿಗೆ ಬಿದ್ದು ಮೃತನಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ:ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಬೇಕು: ಜೊಲ್ಲೆ
Advertisement
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬಾಲಕನ ಮೃತ ದೇಹವನ್ನು ಹೊರತೆಗೆದಿದ್ದಾರೆ. ಇನ್ನೂ ಸ್ಥಳಕ್ಕೆ ಮೇಯರ್ ಹಾಗೂ ಆಯುಕ್ತರು ಬರುವಂತೆ ಜನರು ಆಗ್ರಹಿಸಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.