ದಾವಣಗೆರೆ: ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಅವರು ಸಚಿವರಾಗುವ ಆಸೆಯನ್ನು ಹೊರ ಹಾಕಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗೆ ಉಸ್ತುವಾರಿ ಸಚಿವರಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ಹೇಳಿದ್ದಾರೆ.
Advertisement
Advertisement
ಬೇರೆ ಜಿಲ್ಲೆಯ ಶಾಸಕರನ್ನು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಆದರೆ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ದಾವಣಗೆರೆ ಉಸ್ತುವಾರಿ ಸಚಿವರಾಗಿದ್ದಾರೆ.
Advertisement
ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿದ್ದಾರೆ. ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದು ಒತ್ತಾಯಿಸುತ್ತೇನೆ. ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ಇಂದು ನಡೆಯುವ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
Advertisement
ಸರ್ಕಾರ ಸುಭದ್ರವಾಗಿರುತ್ತದೆ ಯಾವುದೇ ಅನುಮಾನವಿಲ್ಲ. ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಲೀಡ್ ಬಂದ ಕುರಿತು ಪ್ರತಿಕ್ರಿಯಿಸಿದ ಅವರು, ಮತಯಂತ್ರದ ದೋಷದಿಂದ ಹೆಚ್ಚು ಲೀಡ್ ಬರಲು ಸಾಧ್ಯ. ಬಿಜೆಪಿಯವರು ಮತಯಂತ್ರವನ್ನು ಏನೋ ಮಾಡಿದ್ದಾರೆ ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ.