ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ (Davangere South Constituency) ಉಪಚುನಾವಣೆಗೆ (ByElection) ಜಿಲ್ಲಾ ಚುನಾವಣಾಧಿಕಾರಿಗಳು ಸಿದ್ಧತೆ ಆರಂಭಿಸಿದ್ದಾರೆ.
ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ 3 ರಂದು ಮತದಾರರ ಪಟ್ಟಿ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮತದಾರರ ಪಟ್ಟಿಗೆ ಆಕ್ಷೇಪ ಸಲ್ಲಿಸಲು ಜನವರಿ 24ರ ವರೆಗೆ ಆವಕಾಶ ನೀಡಲಾಗುತ್ತದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 217 ಮತಗಟ್ಟೆಗಳಿವೆ. 2,31062 ಮತದಾರರಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸೂಚನೆ ನೀಡಿದೆ.
ಅದಕ್ಕೆ ಪೂರಕವಾಗಿ ಹಂತ ಹಂತವಾಗಿ ಉಪ ಚುನಾವಣೆ ಸಿದ್ಧತೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ: ವಿಧಾನಸಭೆಯಲ್ಲಿ ಸಿಎಂ ಸಂತಾಪ

