ನ್ಯಾಮತಿ ಬ್ಯಾಂಕ್ ದರೋಡೆ ಪ್ರಕರಣ – ತಮಿಳುನಾಡಿನ ಪಾಳು ಬಾವಿಯಲ್ಲಿ ಚಿನ್ನಾಭರಣ ಇಟ್ಟಿದ್ದ ಗ್ಯಾಂಗ್!

Public TV
1 Min Read
DAVANAGERE BANK CASE

– ಲೋನ್ ಅರ್ಜಿ ತಿರಸ್ಕಾರಿಸಿದ್ದಕ್ಕೆ ಪ್ರತೀಕಾರ – ವೆಬ್ ಸೀರಿಸ್ ನೋಡಿ ಪ್ಲ್ಯಾನ್!
– ಕುಟುಂಬದೊಂದಿಗೂ ಮಾಹಿತಿ ಹಂಚಿಕೊಳ್ಳದ ಖದೀಮರು!

ದಾವಣಗೆರೆ: ನ್ಯಾಮತಿ ಎಸ್‍ಬಿಐ ಬ್ಯಾಂಕ್ (Nyamathi SBI Bank) ದರೋಡೆ ಪ್ರಕರಣದಲ್ಲಿ (Bank Robbery) ಆರು ತಿಂಗಳ ಬಳಿಕ ಚಿನ್ನಾಭರಣ (Gold) ಸಹಿತ ಅರೋಪಿಗಳ ಬಂಧನವಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಯಲಾಗಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಎಲ್ಲವನ್ನೂ ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.

davanagere nyamathi sbi robbery case thieves hiding gold in the well

ಪ್ರಕರಣದಲ್ಲಿ 6 ಜನ ಆರೋಪಿಗಳ ಬಂಧನವಾಗಿದೆ. ಕದ್ದಿದ್ದ 17 ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ. ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ 5 ಆರೋಪಿಗಳು ಅರೆಸ್ಟ್

DAVANAGERE BANK CASE 1

ಆರೋಪಿಗಳು ಮೊಬೈಲ್, ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್‍ನಲ್ಲಿ ಇಟ್ಟಿದ್ದರು.

ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಭಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದರು.

ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್‍ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಈ ಪ್ರಕರಣಗಳಲ್ಲಿ ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಇದನ್ನೂ ಓದಿ: ದಾವಣಗೆರೆ| ಬ್ಯಾಂಕ್ ದರೋಡೆಗೆ ಬಂದಿದ್ದ ಯುಪಿ ಗ್ಯಾಂಗ್ ಮೇಲೆ ಪೊಲೀಸರಿಂದ ಫೈರಿಂಗ್ – ನಾಲ್ವರು ಅರೆಸ್ಟ್

Share This Article