ದಾವಣಗೆರೆ: ಕಾಂಗ್ರೆಸ್‌ನ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಅಲ್ಪಸಂಖ್ಯಾತರು ಕೈಕೊಡುತ್ತಾರೆ ಎನ್ನಲಾಗಿದ್ದ ಕ್ಷೇತ್ರದಲ್ಲಿ ಸಮರ್ಥ್ ಮಲ್ಲಿಕಾರ್ಜುನ್ (Samarth Mallikarjun) ಜಯಗಳಿಸಿದ್ದಾರೆ.
ಜಿದ್ದಾಜಿದ್ದಿನಿಂದ ಕೂಡಿದ್ದ ಫಲಿತಾಂಶದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲನುಭವಿಸಿದ್ದಾರೆ.
ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ 9ರಂದು ಜಿದ್ದಾಜಿದ್ದಿನ ಚುನಾವಣೆ ನಡೆದಿತ್ತು. 2,31,072 ಒಟ್ಟು ಮತದಾರರಿದ್ದು, 1,58,131 (68.43%) ಮತ ಚಲಾವಣೆ ಆಗಿತ್ತು. 25 ಅಭ್ಯರ್ಥಿಗಳು ಕಣದಲ್ಲಿದ್ದರು.












