ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ (By_Election ) ಕಾಂಗ್ರೆಸ್‍ನ (Congress) ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ.
ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್‍ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್ ನಾಯಕರಿಂದ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಮುಖಂಡರು ನಮ್ಮ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಇದೇ ವೇಳೆ ಆಕ್ರೋಶ ಹೊರಹಾಕಿದ್ದಾರೆ.
ಸಮರ್ಥ್ ಶಾಮನೂರು (Samarth Shamanur) ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್ ನಾಯಕರು (Muslim Leaders) ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ(Shamanuru Shivashankarappa) ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದ ಟಿಕೆಟ್ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್‌ಗೆ ಟಿಕೆಟ್ ನೀಡಿದೆ. ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

