ದಾವಣಗೆರೆ: ದೆಹಲಿಯ (NewDelhi) ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಮಹಿಳಾ ಕುಸ್ತಿಪಟುಗಳ ಹೋರಾಟ (Wrestlers Protest) ಬೆಂಬಲಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ ರಾಷ್ಟ್ರ ಸಮಿತಿಯ ಕರೆಯ ಮೇರೆಗೆ ದಾವಣಗೆರೆಯಲ್ಲಿ AIDYO ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದೆ.
Advertisement
ನಗರದ ಹದಡಿ ರಸ್ತೆಯಲ್ಲಿನ DRR ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಕೈಗೊಳ್ಳಬೇಕು. ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು. ಹೆಣ್ಣು ಮಕ್ಕಳು ಧೈರ್ಯದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತಹ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿದರು.
Advertisement
Advertisement
ಬೇಟಿ ಬಚಾವೋ ಬೇಟಿ ಪಡಾವೋ ಎಂದು ಘೋಷಣೆ ನೀಡಿರುವ ಸರ್ಕಾರವು ಕ್ರೀಡೆಯಲ್ಲಿ ಹೆಣ್ಣು ಮಕ್ಕಳ ಸಾಧನೆಗೆ ಪೂರಕವಾಗಿ ಸುರಕ್ಷಿತ ವಾತಾವರಣ ಸೃಷ್ಟಿಸಬೇಕು. ಆದರೆ ಕುಸ್ತಿಪಟುಗಳು ರಸ್ತೆಗಳಿದು ಧರಣಿ ನಡೆಸಿದರೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಇದು ಆಳುವವರ ಈ ಧೋರಣೆಯು ಮಹಿಳೆಯರ ಬಗ್ಗೆ ತಮಗಿರುವ ತತ್ಸಾರ ಭಾವನೆ ತೋರುತ್ತದೆ. ಅಲ್ಲದೇ ದುಷ್ಟ ಶಕ್ತಿಗಳಿಗೆ ಮತ್ತಷ್ಟು ಬಲ ತುಂಬುತ್ತದೆ. ಇದರಿಂದಾಗಿ ಕ್ರೀಡಾರಂಗದಲ್ಲಿ ಹೆಣ್ಣು ಮಕ್ಕಳ ಸಾಧನೆ ಹಿಂದೆ ಬೀಳುತ್ತದೆ ಎಂದು ಅಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ವಿಶ್ವವ್ಯಾಪಿಯಾಗಿಸಲು ಚಿಂತನೆ – ಬ್ರಿಜ್ ಭೂಷಣ್ ಬಂಧನಕ್ಕೆ ಮೇ 21 ಗಡುವು
Advertisement
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನ ವಿಶ್ವವ್ಯಾಪಿಯಾಗಿಸಲು ನಿರ್ಧರಿಸಿದ್ದು, ಇದೀಗ ವಿದೇಶ ಕ್ರೀಡಾಪಟುಗಳ ಬೆಂಬಲವನ್ನೂ ಕೋರಿದ್ದಾರೆ. ಇದನ್ನೂ ಓದಿ: ಯುದ್ಧ ಮುಂದುವರಿಸಲಿ – ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ದಾದಾ