ದಾವಣಗೆರೆ: ‘ಬೆಳಗಿನ ನಡೆ ಗ್ರಾಮಗಳ ಕಡೆ’ ಎಂಬ ವಿನೂತನ ಕಾರ್ಯಕ್ರಮ ಮೂಲಕ ಅಧಿಕಾರಿಯೊಬ್ಬರು ಜನಸೇವೆಗೆ ಪಣ ತೊಟ್ಟಿದ್ದಾರೆ. ಜಿಪಂ ಸಿಇಒ ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಬಳಿಕವೇ ಕಚೇರಿಗೆ ತೆರಳುತ್ತಾರೆ.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಂಥಾಲಯ, ಅಂಗನವಾಡಿ, ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಯ ಗಿತ್ತೆ ಮಾಧವ್ ವಿಠಲ್‌ರಾವ್. ದಾವಣಗೆರೆ (Davanagere) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದಾರೆ. ಅಧಿಕಾರಿಗಳ ಬೆಳಗಿನ ನಡೆ, ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ. ದಿನಕ್ಕೆ ಎರಡರಿಂದ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರ ಜೊತೆ ಔಪಚಾರಿಕ ಸಭೆ ನಡೆಸಿ ಪಂಚಾಯಿತಿಯ ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!
ಸಿಇಒ ಗಿತ್ತೆ ಮಾಧವ್ ವಿಠಲ್‌ರಾವ್ ಗ್ರಾಮದಲ್ಲಿ ಏನೇನು ಸಮಸ್ಯೆ ಇದೆ ಅಂತ ಗ್ರಾಮಸ್ಥರ ಬಳಿ ಮಾಹಿತಿ ಪಡೆದುಕೊಂಡು ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಕೂಡ ಮಾಡುತ್ತಿದ್ದಾರೆ. ಈಗಾಗಲೇ ಮಾಯಕೊಂಡ, ಅಣಜಿ, ನರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಜಿಲ್ಲಾ ಕೇಂದ್ರದಿAದ ನೂರಾರು ಕಿ.ಮೀ ದೂರದಲ್ಲಿರುವ ಗ್ರಾಮಕ್ಕೂ ಕೂಡ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ನಡೆ ಬಗ್ಗೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ ಹೀಗೆ ಗ್ರಾಮಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡುತ್ತಾರೆ. ಅಲ್ಲದೇ, ಸಾಮಾನ್ಯ ಜನರಿಗೂ ಜಿಲ್ಲಾ ಮಟ್ಟದ ಅಧಿಕಾರಿ ಅಂದ್ರೆ ಯಾರು, ಅವರ ಕಾರ್ಯ ಏನು ಅನ್ನೋದು ಗೊತ್ತಾಗುತ್ತದೆ. ಅಧಿಕಾರಿಗಳಿಗೂ ಗ್ರೌಂಡ್ ಲೆವೆಲ್ ಮಾಹಿತಿ ಲಭ್ಯ ಆಗುತ್ತದೆ. ಗಿತ್ತೆ ಮಾಧವ್ ವಿಠಲ್‌ರಾವ್ ಅವರ ಕಾರ್ಯಕ್ಕೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. ಇದನ್ನೂ ಓದಿ: ಮುಂಡಗೋಡಿನ ಕಾತೂರಿನಲ್ಲಿ ಆನೆ ಪ್ರತ್ಯಕ್ಷ; ಗಂಟೆಗಟ್ಟಲೇ ರಸ್ತೆ ಬಂದ್

