ದಾವಣಗೆರೆ: ರಾಜ್ಯದಲ್ಲಿ ದೇಶ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶ ವಿರೋಧಿ ಕೃತ್ಯಗಳ ಹಿಂದಿರುವವರನ್ನು ಪತ್ತೆ ಹಚ್ಚಲು ಗೃಹ ಸಚಿವ ಬೊಮ್ಮಾಯಿ ರವರು ಬೆಂಗಳೂರಿನಲ್ಲಿ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ನಾಳೆ ಸಭೆ ಕರೆಯುತ್ತೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಸರ್ಕ್ಯೂಟ್ ಹೌಸ್‍ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಹೇಳಿಕೆಗಳು, ಕೃತ್ಯಗಳ ಹಿಂದೆ ಒಂದು ವ್ಯವಸ್ಥಿತ ಸಂಚು, ಷಡ್ಯಂತ್ರ ಇದೆ. ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ. ಹಾಗಾಗಿ ಇದನ್ನೆಲ್ಲ ಹತ್ತಿಕ್ಕಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.
Advertisement
Advertisement
ರಾಜ್ಯದಲ್ಲಿ ದೇಶದ್ರೋಹಿ ಕೃತ್ಯಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ವಿದ್ಯಾರ್ಥಿಗಳು ಅದರಲ್ಲೂ ಹೆಣ್ಣು ಮಕ್ಕಳನ್ನು ಇಂತಹ ಕೆಲಸಗಳಿಗೆ ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ, ಗಲಭೆ ಸೃಷ್ಟಿಸುವ, ವೈಷಮ್ಯ ಉಂಟುಮಾಡುವ ಕೆಲಸ ನಡೆಯುತ್ತಿದೆ. ದೇಶದ್ರೋಹಿ ಹೇಳಿಕೆ ನೀಡಿರುವ ಅಮೂಲ್ಯ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳ ಕುಮ್ಮಕ್ಕು ಇದ್ದಂತಿದೆ. ಇದರ ಬಗ್ಗೆ ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನು ಬೇರು ಸಹಿತ ಕಿತ್ತು ಹಾಕಲಾಗುವುದು ಎಂದರು.
Advertisement
ಯಾವುದೇ ರೀತಿಯ ದೇಶವಿರೋಧಿ ಚಟುವಟಿಕೆಗಳು ಕಂಡು ಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇನೆ. ಅದೇ ರೀತಿ ರಾಜ್ಯದಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ದೇಶ ವಿರೋಧಿ ಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ವೇದಿಕೆಗಳನ್ನು ವಿದ್ಯಾರ್ಥಿಗಳು ಬಳಸದಂತೆ ಎಚ್ಚರವಹಿಸಿ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆಯೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Advertisement
ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗ ಪಡಿಸಿಕೊಂಡು ಇಂತಹ ಚಟುವಟಿಕೆಗಳಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಇಂತಹ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾದರೂ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಲ್ಬುರ್ಗಿಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಶಾಸಕರು ಕೋಮುಭಾವನೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ. ಈ ಬಗ್ಗೆಯೂ ಸಹ ಪ್ರಕರಣ ದಾಖಲಾಗಿದೆ. ಮಾಧ್ಯಮದವರು ಶಾಸಕರ ಭವನಕ್ಕೆ ಪ್ರವೇಶ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಈ ವಿಚಾರ ಸ್ಪೀಕರ್ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ಜಾರಿಕೊಂಡರು.