ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ.
ಶಿವಮ್ಮ(60) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ವೃದ್ಧೆ. ಮಧ್ಯ ರಾತ್ರಿ ಅಡುಗೆ ಸಿಲಿಂಡರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ಶಿವಮ್ಮ ಸ್ಫೋಟದಿಂದ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆ ಘಟನಾ ಸ್ಥಳದ ಸುತ್ತಮುತ್ತ ಮನೆಯವರಲ್ಲಿ ಭಯದ ವಾತವರಣ ಸೃಷ್ಟಿಸಿತ್ತು. ಸಿಲಿಂಡರ್ ಸ್ಫೋಟಕ್ಕೆ ಭಾಗಶಃ ಮನೆಗೆ ಹಾನಿ ಆಗಿದ್ದು, ಮನೆ ಗೋಡೆ ಹಾಗೂ ಸಾಮಾಗ್ರಿಗಳು ಹಾಳಾಗಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಈ ಬಗ್ಗೆ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ ಬೆಂಕಿ ನಂದಿಸಿದರು.