ದಾವಣಗೆರೆ: ರಾಜ್ಯದಲ್ಲಿ ದಿನೇದಿನೇ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗುತ್ತಿದ್ದು, ಇದೀಗ ದಾವಣಗೆರೆಯಲ್ಲೂ (Davanagere) ಮಹಿಳೆಯೊಬ್ಬರಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಚನ್ನಮ್ಮ ತಾಲೂಕಿನ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.ಇದನ್ನೂ ಓದಿ: ಶಿವಣ್ಣ ನಮ್ಮ ರಾಜ್ಯದ ಆಸ್ತಿ: ಕೃಷ್ಣ ಬೈರೇಗೌಡ
Advertisement
Advertisement
ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು ತೀರಿಸಿದ್ದರು. ಇದಾದ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆ ಖರ್ಚಿಗಾಗಿ ಮೈಕ್ರೋ ಫೈನಾನ್ಸ್ನಲ್ಲಿ ಮತ್ತೆ ಸಾಲ ಮಾಡಿದ್ದಾರೆ. ಇದೀಗ ಬಾಕಿ ಸಾಲ ಪಾವತಿ ಮಾಡುತ್ತಿದ್ದರೂ ಸಹ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಮಹಿಳೆಯ ಮನೆಗೆ ಬಂದು ಬೆದರಿಕೆ ಹಾಕಿ, ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ವೃದ್ಧ ದಂಪತಿಗಳು ಬೇಸತ್ತಿದ್ದಾರೆ.
Advertisement
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಉನ್ನತಮಟ್ಟದ ಸಭೆ ನಡೆಸಿ, ಹಲವು ಕ್ರಮಗಳನ್ನು ಕೈಗೊಂಡಿದ್ದರು. ಸಾಲಗಾರರ ಹಿತ ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು.ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಪಿವೋಟ್ ಚಿತ್ರದ ಸ್ನೀಕ್ ಪೀಕ್
Advertisement