Connect with us

Corona

ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆ ಬಾತ್ ರೂಂನಲ್ಲಿ ನೇಣಿಗೆ ಶರಣು

Published

on

ದಾವಣಗೆರೆ: ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆಯ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆಯ ಬಸಾಪುರ ನಿವಾಸಿ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಇವರಿಗೆ ಕೆಮ್ಮು ಜ್ವರದಂತಹ ಲಘು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

ಕೊರೊನಾ ಲಕ್ಷಣ ಕಾಣಿಸಿಕೊಂಡ ವ್ಯಕ್ತಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೊತೆಗೆ ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರವುದಕ್ಕೂ ಮುನ್ನವೇ ಇಂದು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯ ಬಾತ್ ರೊಂನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ ಕೊರೊನಾ ಬಂದರೆ ನನ್ನ ಕ್ವಾರಂಟೈನ್ ಮಾಡುತ್ತಾರೆ ಎಂಬ ಭಯದಿಂದ ಈ ರೀತಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.