ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮೆದೆಕೆರೆನಹಳ್ಳಿ ಗ್ರಾಮದಲ್ಲಿ ಮಳೆಯಾದರೆ ಮುಖ್ಯರಸ್ತೆಯೇ ಕೆರೆಯಾಗಿ ಮಾರ್ಪಾಡು ಆಗುತ್ತದೆ. ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಗ್ರಾಮದಲ್ಲಿ ಮಳೆಯಾದರೆ ಸಾಕು ಇಲ್ಲಿನ ಮುಖ್ಯ ರಸ್ತೆ ಕೆರೆಯಾಗಿ ಮಾರ್ಪಾಡು ಆಗುತ್ತಿದ್ದು, ಶಾಲಾ ಮಕ್ಕಳು ಶಾಲೆಗೆ ಹೋಗಬೇಕು ಅಂದರೆ ಹರಸಾಹಸ ಪಡುವಂತಹ ಸ್ಥಿತಿ ಉಂಟಾಗಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
Advertisement
Advertisement
ಮಳೆ ನೀರು ಸುವ್ಯವಸ್ಥಿತವಾಗಿ ಹೋಗಲು ಚರಂಡಿ ವ್ಯವಸ್ಥೆ ಮಾಡಿದರೆ ನೀರು ನಿಲ್ಲುವ ಪ್ರಶ್ನೆಯೇ ಇರುವುದಿಲ್ಲ. ಆದರೆ ಸುವ್ಯವಸ್ಥಿತವಾದ ಕಾಮಗಾರಿ ಮಾಡದೇ ಇದ್ದುದರಿಂದ ಗ್ರಾಮದ ಪ್ರಮುಖ ರಸ್ತೆಯೇ ಕೆರೆಯಾಗಿ ಮಾರ್ಪಡು ಆಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.