ದಾವಣಗೆರೆ: ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಪೂರೈಕೆ ಆಗಬೇಕು ಎಂದು ಮತ್ತೆ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ.
ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯನ್ನು ನೆರವೇರಿಸುವಲ್ಲಿ ವಿಳಂಬವಾದರೆ ನಮ್ಮ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
Advertisement
Advertisement
ಕೆಲ ದಿನಗಳ ಹಿಂದೆ ಪರಿಶಿಷ್ಟ ಪಂಗಡಕ್ಕೆ ಈಗ ಇರುವ ಶೇ 3.5 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇಕಡಾ 7.5ಕ್ಕೆ ಏರಿಸುವಂತೆ ಆಗ್ರಹಿಸಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದರು. ಅ ಸಮಯದಲ್ಲಿ ರಾಜ್ಯ ಸರ್ಕಾರ ಸ್ವಾಮೀಜಿ ಅವರ ಬಳಿ ಎರಡು ತಿಂಗಳು ಗಡುವು ಕೇಳಿತ್ತು. ಆದರೆ ಈಗ ಶಾಸಕರ ರಾಜೀನಾಮೆ ಇಂದ ಸರ್ಕಾರವೇ ಪತನವಾಗುತ್ತಿದೆ.
Advertisement
Advertisement
ಈ ಸಮಯದಲ್ಲಿ ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಪೂರೈಕೆ ಆಗಬೇಕು. ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ. ಇಲ್ಲದಿದ್ದರೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಇರುವ ವಾಲ್ಮೀಕಿ ಸಮಾಜದ 15 ಜನ ಶಾಸಕರು ರಾಜೀನಾಮೆ ಕೊಡುವುದು ಶತಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.