– ಸಚಿವರ ಮಿಲ್ ಬಳಿ `ಚೋರರಿಗೊಂದು ಕಾಲ, ಶೂರರಿಗೊಂದು ಕಾಲʼ ಹಾಡಿಗೆ ಭರ್ಜರಿ ಸ್ಟೆಪ್ಸ್!
ದಾವಣಗೆರೆ: ನಗರದಲ್ಲಿ ವಿಶ್ವ ಹಿಂದೂ ಪರಿಷತ್, ಸಾರ್ವಜನಿಕ ವಿಜಯದಶಮಿ ಸಮಿತಿ ವತಿಯಿಂದ ಅದ್ದೂರಿಯಾಗಿ ವಿಜಯದಶಮಿ ಶೋಭಾಯಾತ್ರೆ ನಡೆಯುತ್ತಿದೆ.
ಶೋಭಾಯಾತ್ರೆಯ ದಾರಿಯುದ್ದಕ್ಕೂ ಸುಂದರವಾದ ಟ್ಯಾಬ್ಲೋಗಳನ್ನು ನಿರ್ಮಿಸಲಾಗಿದೆ. ಆಂಜನೇಯ, ಶಿವಾಜಿ, ವೆಂಕಟೇಶ್ವರ ಸರ್ಕಲ್ ನಲ್ಲಿ ಶ್ರೀ ಕೃಷ್ಣ, ಬೃಹತ್ ಆಂಜನೇಯನ ಟ್ಯಾಬ್ಲೋ ಮಾಡಲಾಗಿದೆ. ಅಲ್ಲದೇ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಭಾರತ ಮಾತೆ, ಭುವನೇಶ್ವರಿ ದೇವಿ, ಅಕ್ಕಮಹಾದೇವಿ, ಅಂಬೇಡ್ಕರ್, ಬಸವಣ್ಣ ಸೇರಿದಂತೆ ದೇಶಭಕ್ತರು ಹಾಗೂ ಸಮಾಜ ಸುಧಾರಕರ ಟ್ಯಾಬ್ಲೋಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ವಿಶ್ವಕರ್ಮ ಮಂಡಳಿ ಮಾಡಿ ಸರ್ಕಾರ ಮರೆತಂತಿದೆ: ಶಂಕರಾತ್ಮಾನಂದ ಸರಸ್ವತಿ ಶ್ರೀ ಕಿಡಿ
1500ಕ್ಕೂ ಹೆಚ್ಚು ಪೊಲೀಸರು, ಡಿಆರ್ ಹಾಗೂ ಕೆಎಸ್‍ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ವಿನ ಭದ್ರತೆ ಕೈಗೊಳ್ಳಲಾಗಿದೆ. ವಿವಾದಾತ್ಮಕ ಘೋಷಣೆ, ಪೋಸ್ಟರ್ ಪ್ರದರ್ಶನ ಮಾಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಮಸೀದಿಗಳಿಗೆ ಭದ್ರತೆ ನೀಡಲಾಗಿದ್ದು, ಸಿಸಿ ಕ್ಯಾಮೆರಾ, ಡ್ರೋನ್ ಮೂಲಕ ಹದ್ದಿನ ಕಣ್ಣಿಡಲಾಗಿದೆ.
ಶೋಭಾಯಾತ್ರೆಯಲ್ಲಿ ಡೊಳ್ಳು ಬಾರಿಸುವ ಮೂಲಕ ಮಾಜಿ ಸಚಿವ ರೇಣುಕಾಚಾರ್ಯ ಗಮನ ಸೆಳೆದಿದ್ದಾರೆ. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಡಿಜೆಗೆ ಅನುಮತಿ ಕೊಡಿಸುವಲ್ಲಿ ಹಾಗೂ ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದ ಬ್ಯಾನರ್ ವಿಚಾರವಾಗಿ ಮೌನವಾಗಿದ್ದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಒಡೆತನದ ಮಿಲ್ ಎದುರು `ಚೋರರಿಗೊಂದು ಕಾಲ, ಶೂರರಿಗೊಂದು ಕಾಲ’ ಹಾಡು ಹಾಕಿ ಯುವಕರು, ಬಿಜೆಪಿ ನಾಯಕರು ಡ್ಯಾನ್ಸ್ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್