ನವದೆಹಲಿ: ದಾವೂದಿ ಬೊಹ್ರಾ ಸಮುದಾಯದ (Dawoodi Bohra community) ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿ ಮಾಡಿ, ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ಜಾರಿ ಮಾಡಿದ್ದಾಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
Had a wonderful meeting with members of the Dawoodi Bohra community! We talked about a wide range of issues during the interaction.@Dawoodi_Bohras pic.twitter.com/OC09EgcJPG
— Narendra Modi (@narendramodi) April 17, 2025
ಇದು ನಮ್ಮ ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಪ್ರಧಾನ ಮೋದಿಯವರ `ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂಬ ದೃಷ್ಟಿಕೋನದಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣದ ಬಗ್ಗೆ ಎಫ್‌ಐಆರ್ ಆಗಿಲ್ಲ ಯಾಕೆ: ಧನಕರ್ ಪ್ರಶ್ನೆ
ದಾವೂದಿ ಬೊಹ್ರಾಗಳು ಪ್ರಾಥಮಿಕವಾಗಿ ಪಶ್ಚಿಮ ಭಾರತದ ಮುಸ್ಲಿಂ ಸಮುದಾಯವಾಗಿದ್ದು, ಈ ಸಮುದಾಯದ ಜನರು ಪ್ರಪಂಚದಾದ್ಯಂತ 40ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿದ್ದಾರೆ. ಇದು ಈಜಿಪ್ಟ್‌ನಲ್ಲಿರುವ ಪ್ರವಾದಿ ಮುಹಮ್ಮದ್ ಅವರ ನೇರ ವಂಶಸ್ಥರಾದ ಫಾತಿಮಿಡ್ ಇಮಾಮ್‌ಗಳ ಪರಂಪರೆಯನ್ನು ಗುರುತಿಸುತ್ತದೆ. ಪ್ರಪಂಚದಾದ್ಯಂತದ ಇರುವ ಈ ಸಮುದಾಯದವರು ಅವರ ನಾಯಕ ಅಲ್-ದೈ ಅಲ್-ಮುತ್ಲಕ್‌ನಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.