ನವದೆಹಲಿ: ಜಂತರ್ ಮಂತರ್‌ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಂಗ್ಚುಕ್ ಅವರು ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸೋನಮ್ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ – ದೆಹಲಿ ಹೈಕೋರ್ಟ್‌ಗೆ ಕೇಂದ್ರದಿಂದ ಮಾಹಿತಿ
ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶಗಳಿಗೆ ಅನುಸಾರವಾಗಿ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಪ್ರತಿಭಟನಾಕಾರರು ಜಂತರ್ ಮಂತರ್ ಅನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಗೌರವಾನ್ವಿತ ಹೈಕೋರ್ಟ್‌ನ ಆದೇಶಗಳನ್ನು ಪಾಲಿಸುವಾಗ ಪ್ರತಿಭಟನಾಕಾರರು ಅಡಚಣೆ ಉಂಟುಮಾಡಲು ಪ್ರಯತ್ನಿಸಿದರು. ಇದರಿಂದ ಸ್ವಲ್ಪ ಗದ್ದಲ ಉಂಟಾಯಿತು. ಆದಾಗ್ಯೂ, ಪೊಲೀಸರು ಸಂಯಮ ವಹಿಸಿ ಸುರಕ್ಷಿತವಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ವಾಂಗ್ಚುಕ್ ಅವರ ದೈನಂದಿನ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ನ್ಯಾಯಾಲಯ ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಶುಕ್ರವಾರ, ವಾಂಗ್ಚುಕ್ ಅವರನ್ನು ಪರೀಕ್ಷಿಸಿದ ವೈದ್ಯರು, ಅವರ ಅಂಗಾಂಗಗಳು ವಿಫಲಗೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸೋನಮ್ ವಾಂಗ್ಚುಕ್ ಉಳಿಸಿ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಸಂದೇಶ
