ಬಾಗ್ದಾದ್: ಇರಾಕ್‍ನಲ್ಲಿರುವ ಅಮೆರಿಕ ಸೇನಾ ಕ್ಯಾಂಪ್‍ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಮತ್ತೆ ಇರಾಕ್ ಮೇಲೆ 2 ಕ್ಷಿಪಣಿ ದಾಳಿ ನಡೆದಿದೆ.
ಇರಾಕ್ ರಾಜಧಾನಿ ಬಾಗ್ದಾದ್‍ನ ಸುರಕ್ಷಿತ ಪ್ರದೇಶವಾದ ಹಸಿರು ವಲಯದಲ್ಲಿ 2 ಕ್ಷಿಪಣಿ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಇರಾನ್ ಕ್ಷಿಪಣಿ ದಾಳಿ ನಡೆದ ಕೇವಲ 24 ಗಂಟೆಗಳ ಒಳಗೆ ಮತ್ತೆರಡು ಕ್ಷಿಪಣಿಗಳ ದಾಳಿಯಿಂದ ಇರಾಕ್‍ನಲ್ಲಿ ಭಯಯ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ಓದಿ: ಇರಾನ್ ಮೇಲೆ ಯುದ್ಧವಿಲ್ಲ, ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡಲ್ಲ: ಟ್ರಂಪ್
Advertisement
Advertisement
ಬಾಗ್ದಾದ್‍ನ ಹಸಿರು ವಲಯವನ್ನು ಇರಾಕ್‍ನ ಸುರಕ್ಷಿತ ಸ್ಥಳವಾಗಿದ್ದು, ಇಲ್ಲಿ ಅಮೆರಿಕ ಸೇರಿದಂತೆ ವಿಶ್ವದ ವಿವಿಧ ದೇಶಗಳ ರಾಯಭಾರ ಕಚೇರಿಗಳಿವೆ. ಹೀಗಾಗಿ ಇದೇ ಪ್ರದೇಶವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‍ಗೆ ಎಚ್ಚರಿಕೆ ನೀಡಿದ ಬೆನ್ನೆಲ್ಲೇ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ತೈಲ ಬೆಲೆ ಏರಿಕೆ ಎಚ್ಚರಿಕೆ!
Advertisement
ಇರಾನ್ ಮತ್ತು ಅಮೆರಿಕದ ಮಧ್ಯೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಬುಧವಾರ ಟ್ರಂಪ್ ಪ್ರತಿಕ್ರಿಯೆ ನೀಡಿದ್ದರು. ಕಳೆದ ರಾತ್ರಿ ಇರಾಕ್ ನಲ್ಲಿರುವ ನಮ್ಮ ವಾಯುನೆಲೆಯ ಮೇಲೆ ನಡೆದ ದಾಳಿಯಲ್ಲಿ ಯಾವುದೇ ಸೈನಿಕ ಹಾಗೂ ಅಧಿಕಾರಿಗಳಿಗೆ ತೊಂದರೆಯಾಗಿಲ್ಲ. ಯಾವುದೇ ಸಾವು, ನೋವುಗಳನ್ನು ಸಂಭವಿಸಿಲ್ಲ. ನಮ್ಮ ಎಲ್ಲಾ ಸೈನಿಕರು ಸುರಕ್ಷಿತರಾಗಿದ್ದಾರೆ. ಅಮೆರಿಕದ ಮಿಲಿಟರಿ ನೆಲೆಗಳಲ್ಲಿ ಕನಿಷ್ಠ ಹಾನಿಯಾಗಿದೆ ಎಂದು ತಿಳಿಸಿದ್ದರು.
Advertisement
ಮೊದಲಿಗಿಂತಲೂ ಅಮೆರಿಕ ಸೈನ್ಯವೂ ಎಲ್ಲದಕ್ಕೂ ಸಿದ್ಧವಾಗಿದೆ. ಸುಧಾರಿತ ಕ್ಷಿಪಣಿಗಳನ್ನು ಹೊಂದಿದ್ದೇವೆ. ಆದರೆ ಅವುಗಳನ್ನು ನಾವು ಬಳಸಲು ಇಚ್ಛಿಸುವುದಿಲ್ಲ. ಯಾಕೆಂದರೆ ನಾವು ಶಾಂತಿಯನ್ನು ಬಯಸುತ್ತೇವೆ. ಇರಾನ್ ಜೊತೆಗೆ ಉತ್ತಮ ಬಾಂಧವ್ಯ ಹೊಂದಲು ಹಾಗೂ ವಿಶ್ವ ಶಾಂತಿಯನ್ನು ಕಾಪಾಡಲು ಇಚ್ಛಿಸುತ್ತೇವೆ ಎಂದು ಟ್ರಂಪ್ ಹೇಳಿದ್ದರು. ಇದನ್ನೂ ಓದಿ: ಇರಾನ್ ಕ್ಷಿಪಣಿ ದಾಳಿಗೆ 80 ಅಮೆರಿಕ ಸೈನಿಕರು ಹತ
ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿ ಉಗ್ರರಿಗೆ ತರಬೇತಿ ನೀಡುತ್ತಿದ್ದ. ಅಷ್ಟೇ ಅಲ್ಲದೆ ಅಮೆರಿಕದ ಭದ್ರತೆಗೆ ಬೆದರಿಕೆ ಒಡ್ಡಿದ್ದ. ಇದರಿಂದಾಗಿ ಆತನನ್ನು ಹತ್ಯೆಗೈಯುವುದು ಅನಿವಾರ್ಯವಾಗಿತ್ತು ಎಂದು ಖಾಸಿಂ ಸೊಲೈಮನಿ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದರು.
US President Trump: No Americans were harmed in last night's attack by the Iranian regime. We suffered no casualties. All our soldiers are safe, only minimal damages were sustained at our military bases. https://t.co/5dW17stxwk
— ANI (@ANI) January 8, 2020
ಇಂಧನ ಹಾಗೂ ಅನಿಲ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ನಾವು ನಂಬರ್ 1. ಸ್ಥಾನದಲ್ಲಿದ್ದೇವೆ. ಹೀಗಾಗಿ ತೈಲ ವಿಚಾರದಲ್ಲಿ ಯಾವುದೇ ದೇಶದ ಮೇಲೆ ಅವಲಂಬಿಸಿಲ್ಲ ಎಂದಿದ್ದರು. ಇರಾನ್ ಉಗ್ರರ ತವರೂರು ಆಗಿದ್ದು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿದೆ. ನಮ್ಮ ಅವಧಿಯಲ್ಲಿ ಆಲ್ ಖೈದಾ ಉಗ್ರ ಬಾಗ್ದಾದಿಯನ್ನು ಹತ್ಯೆ ಮಾಡಲಾಗಿದೆ. ಆರ್ಥಿಕವಾಗಿ ನಾವು ಪ್ರಬಲವಾಗಿದ್ದೇವೆ. ಸೇನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದ್ದರು.