ಪಾಟ್ನಾ: ಬಿಹಾರದಲ್ಲಿ (Bihar) ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ.
ಜೆಡಿಯು ನಾಯಕ ನಿರಂಜನ್ ಕುಶ್ವಾಹ (Niranjan Kushwaha) ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ
ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತ ನವೀನ್ ಕುಶ್ವಾಹ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | 38ರ ಮಹಿಳೆಯ ಕಾಮದಾಟಕ್ಕೆ 19ರ ಯುವಕ ಬಲಿ?
ನ.6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂಡಿಯಾ ಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್, ಎನ್‌ಡಿಎ ಆಡಳಿತ ಡಿಸಿಎಂಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸೇರಿ ಅನೇಕರು ಕಣದಲ್ಲಿದ್ದಾರೆ. ಉಳಿದ 122 ಸ್ಥಾನಗಳಿಗೆ ನ.11ರಂದು ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಏಳನೇ ದಿನಕ್ಕೆ ಕಾಲಿಟ್ಟ ಬೆಳಗಾವಿ ರೈತರ ಪ್ರತಿಭಟನೆ – ರೈತರ ಜೊತೆ ಚಳಿಯಲ್ಲೇ ಮಲಗಿದ ಬಿಜೆಪಿ ನಾಯಕರು

