ಒಡಿಶಾ ರೈಲು ಅಪಘಾತ ಬೆನ್ನಲ್ಲೇ ಮತ್ತೊಂದು ದುರಂತ – ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವು

Public TV
1 Min Read
GOODS TRAIN

ಭುವನೇಶ್ವರ: ಒಡಿಶಾದಲ್ಲಿ (Odisha) ನಡೆದ ತ್ರಿವಳಿ ರೈಲು ಅಪಘಾತದ ಬೆನ್ನಲ್ಲೇ, ಗೂಡ್ಸ್ ರೈಲಿಗೆ (Goods Train) ಸಿಲುಕಿ 6 ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ (Jajpur) ಜಿಲ್ಲೆಯಲ್ಲಿ ನಡೆದಿದೆ.

ಮೃತ ಕಾರ್ಮಿಕರು ಜಾಜ್‌ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ (Railway Siding) ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ (Thunder Storm) ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

ಘಟನೆಯಿಂದ ಇಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಟಕ್‌ನಲ್ಲಿರುವ (Cuttack) ಎಸ್‌ಸಿಬಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡಿರುವ ಕಾರ್ಮಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸಂಬಧಂಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ಅಪಘಾತದ 5 ದಿನಗಳ ಬಳಿಕ ಈ ಘಟನೆ ನಡೆದಿದೆ. ಒಡಿಶಾ ರೈಲು ಅಪಾಘಾತದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದು, ತನಿಖಾಧಿಕಾರಿಗಳು ಮಾನವ ದೋಷ, ಸಿಗ್ನಲ್ ವೈಫಲ್ಯ ಮತ್ತು ಮೂರು ರೈಲುಗಳ ಅಪಘಾತದ ಹಿಂದಿನ ಸಂಭವನೀಯ ಕಾರಣಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ

Share This Article