ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ಘೋಷಣೆ ಮಾಡಲಾಗಿದೆ.
ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಣೆ ಮಾಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನಾಳೆಯು ದಕ್ಷಿಣಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆ (Weather Report) ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.
Advertisement
Advertisement
ಎಲ್ಲೆಲ್ಲಿ ಏನಾಗಿದೆ?
ಮಂಗಳೂರಿನಲ್ಲಿ,ವಿದ್ಯುತ್ ತಂತಿ ತಲುಗಿ ಇಬ್ಬರು ಸಾವನ್ನಪ್ಪಿದ್ದು, ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮಳೆಯಿಂದ ಜಿಲ್ಲೆಯ ನಾನಾ ಕಡೆಗಳಲ್ಲಿ ಅವಾಂತರ ಉಂಟಾಗಿದ್ದು,ಸೇತುವೆಯಿಂದ ಕಾರು ನದಿಗೆ ಬಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೊಂದೆಡೆ ಕಾಸರಗೋಡಿನ ಮಧೂರು ದೇವಸ್ಥಾನ ಜಲಾವೃತಗೊಂಡಿದೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ – ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ
Advertisement
ಮಂಗಳೂರಿನ, ರೊಸಾರಿಯೊ ಶಾಲೆಯ ಬಳಿ ವಿದ್ಯುತ್ ತಂತಿ ಸ್ಪರ್ಶಗೊಂಡು ಪುತ್ತೂರು ಹಾಗೂ ಸಕಲೇಶಪುರ ಮೂಲದ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟಿದ್ದಾರೆ. ಬೆಳಗ್ಗೆ ಜಾವ 4:30ರ ಸುಮಾರಿಗೆ ರಿಕ್ಷಾ ಸ್ವಚ್ಚಗೊಳಿಸಲೆಂದು ಹೊರಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.
Advertisement
ಪುತ್ತೂರಿನ ಜೈನರ ಗುರಿಯಲ್ಲಿ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪುತ್ತೂರಿನ ಸಿಂಗಾಣಿಯಲ್ಲಿ ಗುಡ್ಡ ಕುಸಿದು ಹಲವು ಮನೆಗಳು ಅಪಾಯದಲ್ಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.
ಕುಮಾರಧಾರ ಸ್ನಾನಘಟ್ಟ ಮುಳುಗಡೆ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ದರ್ಪಣ ತೀರ್ಥ ಕೂಡಾ ತುಂಬಿ ಹರಿಯುತ್ತಿದೆ. ಹೀಗಿದ್ದರೂ ನದಿ ದಡದಲ್ಲೇ ಭಕ್ತಾಧಿಗಳು ತೀರ್ಥ ಸ್ನಾನ ಮಾಡುತ್ತಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ.
ಮಧೂರು ದೇವಸ್ಥಾನ ಜಲಾವೃತ: ಮಂಗಳೂರಿನ ಗಡಿ ಭಾಗ ಕಾಸರಗೋಡಿನಲ್ಲೂ ಮಳೆ ಅಬ್ಬರಿಸುತ್ತಿದ್ದು, ಮಧೂರು ದೇವಸ್ಥಾನ ಜಲಾವೃತಗೊಂಡಿದೆ. ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗಕ್ಕೂ ನದಿ ನೀರು ನುಗ್ಗಿ, ದೇವಸ್ಥಾನ ದ್ವೀಪದಂತಾಗಿದೆ. ಪಳ್ಳಂಜಿ -ಪಾಂಡ್ಯ ಎಂಬಲ್ಲಿ ತಡೆಬೇಲಿಯಿಲ್ಲದ ಸೇತುವೆಯಿಂದ ಕಾರೊಂದು ನದಿಗೆ ಬಿದ್ದಿದೆ.ಸವಾರರು ಇಬ್ಬರಿಬ್ಬರನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದು ಕಾರು ನೀರು ಪಾಲಾಗಿದೆ.