ಹಾಸನ: ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಗಂಡನನ್ನು ಕಳೆದುಕೊಂಡಿದ್ದ ಜಿಲ್ಲಾಧಿಕಾರಿ ಕಚೇರಿ (DC Office) ಎಸ್‍ಡಿಎ (SDA) ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ (Hassan) ನಗರದ ರಕ್ಷಣಾಪುರಂನಲ್ಲಿ ನಡೆದಿದೆ.
ಮೃತಳನ್ನು ಸುಚಿತ್ರಾ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿ ಕೃಷ್ಣಮೂರ್ತಿ ವಿಲೇಜ್ ಅಕೌಂಟೆಂಟ್ ಆಗಿದ್ದರು. ಕಳೆದ ಮೂರು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಅವರು ಪತಿಯನ್ನು ಕಳೆದುಕೊಂಡಿದ್ದರು. ಪತಿ ಮರಣದ ನಂತರ ಸುಚಿತ್ರಾಗೆ ಎಸ್‍ಡಿಎ ಹುದ್ದೆ ನೀಡಲಾಗಿತ್ತು. ಜಿಲ್ಲಾಧಿಕಾರಿ ಕಛೇರಿ ಗ್ರಾಮ ಒನ್ ಕೇಂದ್ರದಲ್ಲಿ ಸುಚಿತ್ರಾ ಎಸ್‍ಡಿಎ ಆಗಿ ಕೆಲಸ ಮಾಡುತ್ತಿದ್ದರು.
ಸುಚಿತ್ರಾಗೆ ಒಂದು ಹೆಣ್ಣುಮಗುವಿದ್ದು ರಕ್ಷಣಾಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮಗಳು ಶಾಲೆ ಮುಗಿಸಿ ವಾಪಸ್ ಬಂದು ಮನೆಯ ಬಾಗಿಲು ಬಡಿದಿದ್ದು ಬಾಗಿಲು ತೆರೆಯದಿದ್ದಾಗ ತನ್ನ ಮಾವನಿಗೆ ಕರೆ ಮಾಡಿದ್ದಾರೆ. ನಂತರ ಮಾವ ಆಗಮಿಸಿ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿ ನೋಡಿದಾಗ ಸುಚಿತ್ರಾ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಡಿಕೆಶಿ ರಕ್ಷಣೆಗೆ ಕಾಂಗ್ರೆಸ್‍ನಿಂದ ಕಾನೂನು ಉಲ್ಲಂಘನೆ: ಆರ್.ಅಶೋಕ್ ಕಿಡಿ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಆದರೆ ಮೃತ ಸುಚಿತ್ರಾ ತಾಯಿ ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಡಾವಣೆ ಪೊಲೀಸರಿಗೆ ದೂರು ನೀಡಿದ್ದು, ಯುಡಿಅರ್ ಪ್ರಕರಣ ದಾಖಲಾಗಿದೆ. ಇಂದು ಜಿಲ್ಲಾಸ್ಪತ್ರೆಯಲ್ಲಿ ಸುಚಿತ್ರಾ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಯಿತು.
ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.