ಕಲಬುರಗಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ (Girls Student) ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕನನ್ನು (PT Teacher) ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿನಿಯರ ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನೂ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ
Advertisement
ದೈಹಿಕ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು. ಆದಾಗ್ಯೂ ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ
Advertisement
Advertisement
ಈ ಆರೋಪದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಿ ಆದೇಶಿಸಿಲಾಗಿದೆ. ಇವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(A) (D)ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟಿ ಹೊರಗೆ ಹೋಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ