ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇದೀಗ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.
ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಇದೀಗ ನಿಷೇಧ ಮಾಡಿರುವುದಾಗಿ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೆ ಮೈಸೂರು ಭಾಗದ ಜೀವ ನಾಡಿಯಾಗಿದ್ದ ಕೆಆರ್‍ಎಸ್ ಡ್ಯಾಂಗೆ ಅಪಾಯ ಎದುರಾಗುತ್ತಿದೆ ಎಂದು ವರದಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು.
Advertisement
Advertisement
ಈ ಕುರಿತು ಪಬ್ಲಿಕ್ ಟಿವಿಯಲ್ಲಿ ಸಾಕಷ್ಟು ಬಾರಿ ಸುದ್ದಿ ಬಿತ್ತರವಾಗಿತ್ತು. ಹೀಗಾಗಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೇಬಿ ಬೆಟ್ಟದ ಗಣಿಗಾರಿಕೆಯನ್ನು ನಿಷೇಧ ಮಾಡಲು ಜಿಲ್ಲಾಧಿಕಾರಿಗೆ ಆದೇಶ ನೀಡಿದರು. ಇದೀಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಬೇಬಿ ಬೆಟ್ಟದ ಗಣಿಗಾರಿಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Advertisement
ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗಾಗಿ ಬಳಕೆ ಮಾಡುತ್ತಿದ್ದ ಎಲ್ಲಾ ಯಂತ್ರೋಪಕರಣಗಳನ್ನು ಖಾಲಿ ಮಾಡಬೇಕೆಂದು ಸಹ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಆದೇಶವನ್ನು ಮೀರಿ ಗಣಿಗಾರಿಕೆ ನಡೆಸಿದರೆ ಕ್ರಿಮಿನಲ್ ಕೇಸ್ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.